ಜಿಲ್ಲೆ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಆದರ್ಶ್. ಎಂ.ಕೆ.

ಮಡಿಕೇರಿ: ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಬುಧವಾರ ನಡೆಯಿತು.


ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.


ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಟಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್.ಬಿ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ.ಎನ್.ಎಚ್., ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೈಯದ್ ಅಹಮದ್ ಷಾ ಹುಸೈನಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಿದರು.


ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್.ಬಿ ಅವರು ಅರಣ್ಯ ಹುತಾತ್ಮರಾದವರ ಹೆಸರನ್ನು ಇದೇ ಸಂದರ್ಭದಲ್ಲಿ ವಾಚಿಸಿದರು.