ದೇವದುರ್ಗ: ಬಿಜೆಪಿಯನ್ನು ಶ್ಯಾಮಾಪ್ರಸಾದ್ ಮುಖರ್ಜಿ ಅವರು ತತ್ವ ಸಿದ್ಧಾಂತದ ಆಧಾರದಲ್ಲಿ ಸ್ಥಾಪನೆ ಮಾಡಿದ್ದಾರೆ. ಪಕ್ಷ ಇಂದಿಗೂ ರಾಷ್ಟ್ರೀಯ ತಳಹದಿ ಮೇಲೆ ಮುನ್ನಡೆಯುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶರಣಬಸವ ಪಾಟೀಲ್ ಜೋಳದಹೆಡಗಿ ಹೇಳಿದರು.
ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಸೇವಾ ಪಾಕ್ಷಿಕ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಬುಧವಾರ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಸತತ 11 ವರ್ಷಗಳಿಂದ ಉತ್ತಮ ಕೆಲಸ ಮಾಡುತ್ತಿದ್ದು, ಜಗತ್ತು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ವಿವಿಧ ಜನಪರ ಯೋಜನೆ ಹಾಗೂ ಕಾರ್ಯಕ್ರಮ ಜಾರಿಗೊಳಿಸಿ ಬಡತನ ನಿವಾರಣೆ ಮಾಡುತ್ತಿದ್ದಾರೆ. ದೇಶದ ವಿಚಾರ ಬಂದಾಗ ಶತ್ರುಗಳಿಗೆ ತಕ್ಕಪಾಠ ಕಲಿಸಿದ್ದಾರೆ. ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಹಾಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ದೇಶ ಮೊದಲು ಎನ್ನುವ ಸಂದೇಶ ಸಾರಿದ್ದಾರೆ ಎಂದರು.
ಮಾಜಿ ಸಚಿವ ಕೆ.ಶಿವನಗೌಡ ನಾಯಕ ದೇವದುರ್ಗ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ತಂದಿದ್ದಾರೆ. ದೊಡ್ಡ್ಡ ಶಿಕ್ಷಣ ಸಂಸ್ಥೆ, ಪ್ರತಿ ಹಳ್ಳಿಗೂ ಮೂಲಸೌಲಭ್ಯ, ಉತ್ತಮ ರಸ್ತೆ ಸೇರಿ ವಿವಿಧ ಕೆಲಸ ಮಾಡಿದ್ದಾರೆ. ತಮ್ಮ ಅವಧಿಯಲ್ಲಿ ಅನೇಕ ಕೊಡುಗೆ ತಾಲೂಕಿಗೆ ನೀಡಿದ್ದಾರೆ. ಕಾರ್ಯಕರ್ತರು ಅವರು ಮಾಡಿದ ಕೆಲಸವನ್ನು ಜನರಿಗೆ ತಿಳಿಸಬೇಕು. ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು.
ಜಿಲ್ಲಾ ಕಾರ್ಯದರ್ಶಿ ಸಂತೋಷ್ ರಾಜಗುರು, ಮುಖಂಡರಾದ ಮಲ್ಲನಗೌಡ, ಮಲ್ಲಿಕಾರ್ಜುನ ಪಾಟೀಲ್, ಲಿಂಗನಗೌಡ, ರಮೇಶ ರಾಠೋಡ್, ಲಕ್ಷ್ಮಣ ರಾಠೋಡ್, ಪ್ರಕಾಶ ಪಾಟೀಲ್, ಬಸವರಾಜ ಕೊಪ್ಪರ, ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಅಕ್ಕರಕಿ, ವಿನೋದ್ ನಾಯಕ ಇತರರಿದ್ದರು.