ಮಡಿಕೇರಿ:
ಬೆಂಗಳೂರಿನಿAದ ಕರಾವಳಿ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ರಾಷ್ಟಿçÃಯ ಹೆದ್ದಾರಿ 275ನ್ನು ಸುರಕ್ಷಿತ ಮಾರ್ಗ ಮಾಡುವತ್ತ ರಾಷ್ಟಿçÃಯ ಹೆದ್ದಾರಿ ವಿಭಾಗ ಹೆಜ್ಜೆ ಇಟ್ಟಿದೆ. ಈ ಹೆದ್ದಾರಿಯ 21 ಕಡೆಗಳಲ್ಲಿ ಇರುವ ಅಪಾಯಕಾರಿ ಸ್ಥಳಗಳಲ್ಲಿ ಕಾಂಕ್ರಿಟ್ ತಡೆಗೋಡೆ ಕಟ್ಟಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಸದ್ಯದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯೂ ಇದೆ.
ರಾಜ್ಯ ರಾಜಧಾನಿ ಮತ್ತು ಕರಾವಳಿ ಸಂಪರ್ಕಿಸುವ ಪ್ರಮುಖ ಸಂಪರ್ಕ ಜಾಲಗಳಲ್ಲಿ ಒಂದಾಗಿರುವ ರಾಷ್ಟಿçÃಯ ಹೆದ್ದಾರಿ 275 ಮೈಸೂರಿನಿಂದ ದಕ್ಷಿಣ ಕನ್ನಡದ ಮಾಣಿ ತನಕ ವಿಸ್ತಿರಿಸಿಕೊಂಡಿದೆ. ಕೊಡಗಿನ ಮೂಲಕ ಹಾದು ಹೋಗುವ ಏಕೈಕ ರಾಷ್ಟಿçÃಯ ಹೆದ್ದಾರಿ ಇದಾಗಿದ್ದು, ಜಿಲ್ಲೆಯಲ್ಲಿ ಕುಶಾಲನಗರದಿಂದ ಸಂಪಾಜೆ ತನಕ ಸಾಗುತ್ತದೆ. ಮಡಿಕೇರಿಯಿಂದ ಸಂಪಾಜೆ ಮಧ್ಯೆ ಪಶ್ಚಿಮ ಘಟ್ಟದ ಬೆಟ್ಟಗಳನ್ನು ಸೀಳಿಕೊಂಡು ಈ ಹೆದ್ದಾರಿ ನಿರ್ಮಣವಾಗಿದೆ. ಹಾಗಾಗಿ ರಾಜ್ಯದ ಅಪಾಯಕಾರಿ ರಸ್ತೆಗಳಲ್ಲಿ ಇದು ಕೂಡ ಒಂದು ಎಂದು ಗುರುತಿಸಲಾಗಿದ್ದು, ಮಳೆಗಾಲದಲ್ಲಿ ಮತ್ತಷ್ಟು ಅಪಾಯಕಾರಿ ಆಗಿ ಪರಿಣಮಿಸುತ್ತದೆ.
ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ಚಾರ್ಮಡಿ ಘಾಟ್, ಶಿರಾಡಿ ಘಾಟ್‌ಗಳಲ್ಲಿ ಸಮಸ್ಯೆ ಉಂಟಾದರೆ ಇವೆರಡು ನಗರಗಳನ್ನು ಸಂಪರ್ಕಿಸುವ ಪ್ರಮುಖ ಪರ್ಯಾಯ ಮಾರ್ಗವಾಗಿ ಸಂಪಾಜೆ ಘಾಟ್ ಮೂಲಕ ಹಾದು ಹೋಗುವ ರಾಷ್ಟಿçÃಯ ಹೆದ್ದಾರಿ 275 ಗುರುತಿಸಿಕೊಂಡಿದೆ. ಆದರೆ 2018ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಸಂದರ್ಭ ಈ ಹೆದ್ದಾರಿಯೂ ಹಲವೆಡೆ ಕುಸಿದು ಮಡಿಕೇರಿ-ಸುಳ್ಯ ಮಧ್ಯೆ 2 ತಿಂಗಳುಗಳ ಕಾಲ ಸಂಪರ್ಕ ಕಡಿತವಾಗಿತ್ತು. ನಂತರದ ವರ್ಷಗಳಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ತಾತ್ಕಾಲಿಕ ಪರಿಹಾರ ಕಾರ್ಯಗಳು ನಡೆದಿರುವುದರಿಂದ ಒಂದೆರಡು ಸ್ಥಳಗಳನ್ನು ಹೊರತುಪಡಿಸಿದರೆ ಉಳಿದ ಕಡೆಗಳಲ್ಲಿ ಸದ್ಯಕ್ಕೆ ಬಹುತೇಕ ಸುರಕ್ಷಿತ ಅನ್ನಬಹುದಾದ ಸ್ಥಿತಿ ಇದೆ.
ಇದೀಗ ರಾಷ್ಟಿçÃಯ ಹೆದ್ದಾರಿ ವಿಭಾಗ ಈ ಹೆದ್ದಾರಿಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಹೆದ್ದಾರಿ ಬದಿಯ ಮಣ್ಣು ಕುಸಿತದಿಂದ ಆಗಾಗ್ಗೆ ತಲೆದೋರುತ್ತಿರುವ ಸಂಪರ್ಕ ಕಡಿತ ತೊಂದರೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸುವ ಸಲುವಾಗಿ ರಾಷ್ಟಿçÃಯ ಹೆದ್ದಾರಿ 275ರಲ್ಲಿ 78 ಕಿ.ಮೀ ನಿಂದ 125 ಕಿ.ಮೀ ತನಕ 47 ಕಿ.ಮೀ ವ್ಯಾಪ್ತಿಯಲ್ಲಿ 21 ಕಡೆಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸುವ ಪ್ರಸ್ತಾಪವನ್ನು ರಾಷ್ಟಿçÃಯ ಹೆದ್ದಾರಿ ವಿಭಾಗ ಸರ್ಕಾರದ ಮುಂದೆ ಇಟ್ಟಿತ್ತು.
ರಾಷ್ಟಿçÃಯ ಹೆದ್ದಾರಿ ವಿಭಾಗದ 94 ಕೋಟಿ ರೂ.ಗಳ ಈ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು ಯೋಜನೆಯ ಮೊತ್ತ ಕೂಡ ಬಿಡುಗಡೆ ಆಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಗುತ್ತಿಗೆದಾರರಿಗೆ ಕೆಲಸದ ಆದೇಶಗಳನ್ನು ನೀಡಲಾಗಿದೆ. ಸದ್ಯದಲ್ಲೇ ಕಾಮಗಾರಿ ಆರಂಭಿಸುವAತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ರಾಷ್ಟಿçÃಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಸ್ತೆ ಮೇಲ್ಭಾಗ ಮತ್ತು ಕೆಳಭಾಗದ ಎರಡೂ ಕಡೆಯೂ ತಡೆಗೋಡೆಗಳ ನಿರ್ಮಾಣ ಕಾರ್ಯ ನಡೆಯಲಿದೆ. ಇಳಿಜಾರು ಪ್ರದೇಶಗಳನ್ನು ಕೇಂದ್ರೀಕರಿಸಿ ಕಾಮಗಾರಿ ನಡೆಸಲಾಗುವುದು.
2018ರ ಪ್ರಾಕೃತಿಕ ವಿಕೋಪ ಸಂದರ್ಭ ಕೆದಕಲ್‌ನಿಂದ ಕೊಯನಾಡು ತನಕ 21 ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿ ಮಡಿಕೇರಿ-ಸುಳ್ಯ ಮಧ್ಯೆ ಸಂಪರ್ಕವೇ ಕಡಿತವಾಗಿತ್ತು. ಹಾಗಾಗಿ ನಂತರದ ವರ್ಷಗಳಲ್ಲಿ ಎಚ್ಚೆತ್ತುಕೊಂಡಿರುವ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಸಂಪಾಜೆ ಘಾಟ್ ಪ್ರದೇಶದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬಂದಿದೆ. ಪ್ರತಿವರ್ಷವೂ ಮಳೆಗಾಳ ಮುಗಿಯುತ್ತಿದ್ದಂತೆಯೇ ಅಪಾಯಕಾರಿ ಎಂದು ಗುರುತಿಸಲಾಗಿರುವ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರೋಪಯಾಗಳನ್ನು ಕಲ್ಪಿಸಲಾಗುತ್ತಿತ್ತು. ಇದೀಗ ಶಾಶ್ವತ ಪರಿಹಾರೋಪಾಯಕ್ಕೆ ಮುಂದಾಗಿರುವುದು ಈ ಮಾರ್ಗದಲ್ಲಿ ಸಂಚರಿಸುವವರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ.
ರಾಷ್ಟಿçÃಯ ಹೆದ್ದಾರಿ 274ರಲ್ಲಿ ಮಡಿಕೇರಿ-ಸಂಪಾಜೆ ಮಧ್ಯೆ ಕಾಟಕೇರಿ, ಕರ್ತೋಜಿ, 1ನೇ ಮೊಣ್ಣಂಗೇರಿ, 2ನೇ ಮೊಣ್ಣಂಗೇರಿ, ಮದೆನಾಡು, ಜೋಡುಪಾಲ ಸೇರಿದಂತೆ ಸುಮಾರು 21 ಕಡೆ ಮಣ್ಣು ಕುಸಿತದ ಸಾಧ್ಯತೆಯನ್ನು ರಾಷ್ಟಿçÃಯ ಹೆದ್ದಾರಿ ವಿಭಾಗವೇ ಗುರುತಿಸಿದೆ. ಈ ಪೈಕಿ ಮಳೆಯ ಅಬ್ಬರ ಹೆಚ್ಚಾದರೆ ಮದೆನಾಡು ಸಮೀಪದ ಕರ್ತೋಜಿ ಸುತ್ತಮುತ್ತ ರಸ್ತೆಯಲ್ಲೇ ನೀರು ಉಕ್ಕುವ ಸಾಧ್ಯತೆ ಇರುವುದರಿಂದ ಹೆಚ್ಚು ಅಪಾಯಕಾರಿ ಆಗಬಹುದು ಎನ್ನುವುದು ಅಧಿಕಾರಿಗಳ ಆತಂಕ. ಇಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ 2 ಕಡೆ ಭೂಕುಸಿತ ಸಾಧ್ಯತೆಯನ್ನು ಅಂದಾಜಿಸಲಾಗಿದೆ.
ದೀರ್ಘಕಾಲೀನ ಪರಿಹಾರ ಕಲ್ಪಿಸುವ ಸಲುವಾಗಿ ನಡೆಸಲಾಗುವ 94 ಕೋಟಿ ರೂ. ಮೊತ್ತದ ಯೋಜನೆ 18 ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎನ್ನುತ್ತಾರೆ ಅಧಿಕಾರಿಗಳು. ಈಗಾಗಲೇ ಹೆಚ್ಚು ಅಪಾಯಕಾರಿ ಎಂದು ಗುರುತಿಸಲಾಗಿರುವ ಕರ್ತೋಜಿ ಭಾಗದಿಂದಲೇ ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಇದರ ಜತೆಗೆ ಈ ಭಾಗದಲ್ಲಿ ತುರ್ತು ಪರಿಸ್ಥಿತಿ ಎದುರಾದರೆ ಅದನ್ನು ಎದುರಿಸಲು ಕೂಡ ರಾಷ್ಟಿçÃಯ ಹೆದ್ದಾರಿ ವಿಭಾಗ ಸಜ್ಜಾಗಿದೆ.
ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 275ರಲ್ಲಿ ಒಂದು ವೇಳೆ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಬಂದ್ ಆದರೆ ಇರುವ ಏಕೈಕ ಪರ್ಯಾಯ ಮಾರ್ಗ ಭಾಗಮಂಡಲ-ಕರಿಕೆ ರಸ್ತೆ. 2018ರಲ್ಲಿ ಸಂಭವಿಸಿದ ಪ್ರಾಕÊತಿಕ ವಿಕೋಪದ ವೇಳೆ ರಾಷ್ಟಿçÃಯ ಹೆದ್ದಾರಿ 275ರಲ್ಲಿ ಕುಸಿತವಾಗಿ ಮಂಗಳೂರು ಜತೆ ಮಡಿಕೇರಿ ಸಂಪರ್ಕ ಕಡಿತಗೊಂಡಿದ್ದಾಗ ಈ ಮಾರ್ಗ ಸಾಕಷ್ಟು ಪ್ರಯೋಜನಕಾರಿ ಆಗಿತ್ತು. ಕೊಡಗನ್ನು ಕೇರಳದೊಂದಿಗೆ ಸಂಪರ್ಕಿಸುವ ಅಂತಾರಾಜ್ಯ ರಸ್ತೆಯಾಗಿರುವ ಭಾಗಮಂಡಲ - ಕೇರಳ ರಸ್ತೆಯನ್ನು ನಂತರದ ದಿನಗಳಲ್ಲಾದರೂ ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಂಡಿದ್ದರೆ ಮಳೆಗಾಲದಲ್ಲಿ ರಾಷ್ಟಿçÃಯ ಹೆದ್ದಾರಿ 275ರ ಮೇಲೆ ಹೆಚ್ಚಿನ ಒತ್ತಡ ಬೀಳದಂತೆ ನೋಡಿಕೊಳ್ಳುವ ಅವಕಾಶ ಇತ್ತು. ಆದರೆ ಒಂದು ವೇಳೆ ಈ ವರ್ಷದ ಮಳೆಗಾಲದಲ್ಲಿ ರಾಷ್ಟಿçÃಯ ಹೆದ್ದಾರಿ 275 ಭೂಕುಸಿತದಿಂದ ಸಂಪರ್ಕ ಕಡಿತಗೊಂಡರೆ ಪರ್ಯಾಯ ಮಾರ್ಗವಾಗಿ ಬಳಸುವ ಸ್ಥಿತಿಯಲ್ಲಿ ಭಾಗಮಂಡಲ-ಕರಿಕೆ ರಸ್ತೆ ಇಲ್ಲ ಎನ್ನುತ್ತಾರೆ ಸ್ಥಳೀಯರು.
ರಾಷ್ಟಿçÃಯ ಹೆದ್ದಾರಿ 275ರಲ್ಲಿ 78 ಕಿ.ಮೀ ನಿಂದ 125 ಕಿ.ಮೀ ತನಕ 47 ಕಿ.ಮೀ ವ್ಯಾಪ್ತಿಯಲ್ಲಿ 21 ಕಡೆಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಸರ್ಕಾರ ಅನುಮೋದನೆ ನೀಡಿದೆ. 94 ಕೋಟಿ ರೂ. ವೆಚ್ಚದ ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಗುತ್ತಿಗೆದಾರರಿಗೆ ಕಾಮಗರಿಯ ಆದೇಶವನ್ನೂ ನೀಡಲಾಗಿದೆ. ಹೆಚ್ಚು ಅಪಾಯಕಾರಿ ಎಂದು ಗುರುತಿಸಲಾಗಿರುವ ಕರ್ತೋಜಿ ಭಾಗದಲ್ಲಿ ಮೊದಲು ಕಾಮಗಾರಿ ಆರಂಭಿಸುವAತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲೇ ಕೆಲಸ ಆರಂಭವಾಗಲಿದೆ.
ಗಿರೀಶ್, ಎಇಇ, ರಾಷ್ಟಿçÃಯ ಹೆದ್ದಾರಿ ವಿಭಾಗ