ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ತಿರುಮಲ ನಾಯ್ಕ ಅವರನ್ನು ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಡಾ.ಬಿ.ಜಯಸಿಂಹ ಇತರರು ಅಭಿನಂದಿಸಿದರು. 
ಜಿಲ್ಲೆ

ರಾಷ್ಟ್ರ ಮಟ್ಟದ ಸ್ಪರ್ಧೆಗೆ ತಿರುಮಲ ಆಯ್ಕೆ

ಶಂಕರ ಗೆಜ್ಜಿ

ಬೆಳಗಾವಿ: ಇಲ್ಲಿನ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಬಿಎಎಲ್‌ಎಲ್‌ಬಿ ಪ್ರಥಮ ವಷರ್ದ ವಿದ್ಯಾರ್ಥಿ ತಿರುಮಲ ನಾಯ್ಕ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಚೆಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಮಂತ್ರ ಫೌಂಡೇಷನ್ ಹಾಗೂ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ನಾಗರಿಕ ಯುವ ಸಂಸತ್ತು ಎಂಬ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅವರು ತೃತೀಯ ಸ್ಥಾನ ಪಡೆದು ಬೆಲ್ಲದ ಕಾನೂನು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ತಮ್ಮ ಅತ್ಯುತ್ತಮ ವಾಕ್ಚಾತುರ್ಯದ ಮೂಲಕ ಅವರು ಸಭಿಕರ ಮನ ಗೆದ್ದಿದ್ದರು. ಸುಮಾರು 210 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಪ್ರಾಚಾರ್ಯ ಡಾ.ಬಿ.ಜಯಸಿಂಹ, ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.