ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು. 
ಜಿಲ್ಲೆ

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಇಂದಿರಾ ಎನ್ ಕೆ

ಬ್ರಹ್ಮಾವರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಮತ್ತು ಉಡುಪಿ ಜಿಲ್ಲಾಡಳಿತ, ಜಿಪಂ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸಂಯೋಜನೆಯಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಗುರುವಾರ ಜರುಗಿತು.

ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪದಕ ಗಳಿಸಿದ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು. ಉಡುಪಿ ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ನ್ಯೂ ಕರ್ನಾಟಕ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಚೇತನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಚಂದ್ರಶೇಖರ ಹೆಗ್ಡೆ, ಗ್ರೇಗರಿ ಡಿಸಿಲ್ವ ಉಪಸ್ಥಿತರಿದ್ದರು. ಸಮಾಜಸೇವಕ ನಾಗರಾಜ್ ಪುತ್ರನ್, ನಿವೃತ್ತ ದೈಹಿಕ ಶಿಕ್ಷಣಶಿಕ್ಷಕ ನಾಗರಾಜ ಶೆಟ್ಟಿ ಅವರನ್ನು ಬ್ರಹ್ಮಾವರ ಸ್ಪೋಟ್‌ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಅಂತಾರಾಷ್ಟ್ರೀಯ ಕುಸ್ತಿಪಟು ಸುರೇಶ್ ಪಾಂಡೇಶ್ವರ ಅವರಿಗೆ ಪ್ರೋತ್ಸಾಹಧನ ನೀಡಲಾಯಿತು. ಮಹೇಶ್ ಎ.ಶೆಟ್ಟಿ ಸ್ವಾಗತಿಸಿದರು. ವಿಕ್ರಂ ಪ್ರಭು, ಲಿಂಗಪ್ಪ, ಪ್ರಸನ್ನ ಶೆಟ್ಟಿ ಸನ್ಮಾನಪತ್ರ ವಾಚಿಸಿದರು. ಮೇಜರ್ ಜಿ.ಬಾಲಕೃಷ್ಣ ಶೆಟ್ಟಿ ವಂದಿಸಿದರು. ಸುರೇಶ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.