ವಿಜಯಪುರ: ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ದೇಶಪ್ರೇಮಿ ಕ್ರೀಡಾ ಸಾಧಕ ಮೇಜರ್ ಧ್ಯಾನಚಂದರ ಜನ್ಮದಿನದ ಪ್ರತೀಕವಾದ ರಾಷ್ಟ್ರೀಯ ಕ್ರೀಡಾದಿನವನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕ ಎ.ಎಚ್. ಸಗರ ಅವರು ಧ್ಯಾನಚಂದರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡುತ್ತ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಅವಶ್ಯಕ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿಯನ್ನು ಬೆಳಸಿಕೊಳ್ಳಬೇಕು ಎಂದರು.
ಪ್ರಾಚಾರ್ಯ ಶ್ರೀಧರ ಕುರಬೇಟ, ಶಿಕ್ಷಕರಾದ ಪ್ರವೀಣಕುಮಾರ ಗೆಣ್ಣೂರ, ಕಿರಣ ರಾಠೋಡ ಮತ್ತಿತರರಿದ್ದರು.