ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಡಿಜಿಟಲ್ ಮೀಡಿಯಾ, ಮೇಕಿಂಗ್ ಬಿ.ವೊಕ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರೆಸ್ ಕ್ಲಬ್ ಸಹಕರಾದೊಂದಿಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉಜಿರೆ ಕಾಲೇಜಿನಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ತುಮಕೂರು ಶಿರಾದ ವರ್ಧಮಾನ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಸಂಜಯ್ ಎಸ್.ಗೌಡ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಇಂದು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ಸುದ್ದಿಗಳು ಬರುತ್ತಿವೆ. ಜರ್ನಲಿಸಂ ವಿದ್ಯಾರ್ಥಿಗಳು ಇದನ್ನು ಇನ್ನೊಬ್ಬರಿಗೆ ಕಳುಹಿಸುವ ಮೊದಲು ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಬೇಕು ಎಂದರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್.ಮಾತನಾಡಿ, ದೀಪ ಉರಿಯಲು ಗಾಳಿ ಹೇಗೆ ಮುಖ್ಯವೋ ದೇಶದಲ್ಲಿ ಪ್ರಜಾಪ್ರಭುತ್ವದ ಉಸಿರಾಟಕ್ಕೆ ಮಾಧ್ಯಮ ಆಸ್ತಿತ್ವ ಮುಖ್ಯವಾಗಿದೆ. ದೇಶದ ಜನರಲ್ಲಿ ಜಾಗೃತಿಯನ್ನು ಮೂಡಿಸಿ ಮಾಹಿತಿಯನ್ನು ನೀಡುವ ಮಹತ್ತವಾದ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೇಶಾ ಖಾನಂ ಮಾತನಾಡಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯ ಪ್ರೊ.ವಿಶ್ವನಾಥ ಪಿ.ಅಧ್ಯಕ್ಷತೆ ವಹಿಸಿದರು. ಮಂಜುಶ್ರೀ ಪ್ರಿಂಟರ್ಸ್‌ನ ಮ್ಯಾನೇಜರ್ ಶೇಖರ್ ಹಾಗೂ ಶ್ರೀನಿವಾಸ ಗಲಗಲಿ ಅವರನ್ನು ಗೌರವಿಸಲಾಯಿತು.
ಸಂಘಟನಾ ಕಾರ್ಯದರ್ಶಿ ವಿರಾಟ್ ಪದ್ಮನಾಭ, ಸುನೀಲ್ ಹೆಗ್ಡೆ, ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹಂಪೇಶ್ ಕೆ.ಎಸ್., ಡಿಜಿಟಲ್ ಮೀಡಿಯಾ ಮುಖ್ಯಸ್ಥ ಮಾಧವ ಹೊಳ್ಳ, ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್, ಎಸ್.ಡಿ.ಎಂ.ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಶೈಲೇಶ್ ಕುಮಾರ್, ಡಾ.ಸತೀಶ್ ಕುಮಾರ್ ಅಂಡಿಂಜೆ ಮೊದಲಾದವರು ಉಪಸ್ಥಿತರಿದ್ದರು.
ಎಸ್.ಡಿ.ಎಂ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥರು ಹಾಗೂ ಸಂಘಟನಾ ಸಮಿತಿಯ ಪ್ರಧಾನ ಸಂಚಾಲಕ ಡಾ.ಭಾಸ್ಕರ್ ಹೆಗಡೆ ಸ್ವಾಗತಿಸಿ, ನೈದಿಲೆ ಮತ್ತು ಸಿಂಚನಾ ಕಾರ್ಯಕ್ರಮ ನಿರೂಪಿಸಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ವಂದಿಸಿದರು.
ಯುವ ಪತ್ರಕರ್ತರು ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು, ವಿದ್ಯಾರ್ಥಿಗಳು ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಆಧುನಿಕ ತಂತ್ರಜ್ಞಾನದ ಉಪಯೋಗಳನ್ನು ಪಡೆದುಕೊಂಡುಉನ್ನತಿಯನ್ನು ಸಾಧಿಸಬೇಕು. ಆಯೇಶಾ ಖಾನಂ, ಮಾಧ್ಯಮ ಅಕಾಎಮಿ ಅಧ್ಯಕ್ಷೆ