ಜಿಲ್ಲೆ

ಆ.21 ಮತ್ತು 22 ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಅವಿನಾಶ್ ಜೈನಹಳ್ಳಿ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ಆ.21 ಮತ್ತು 22 ರಂದು ‘ಭಾರತದಲ್ಲಿ ಬುಡಕಟ್ಟು ಪರಿವರ್ತನೆ : ಸಮಸ್ಯೆಗಳು ಮತ್ತು ಸವಾಲುಗಳು’ ವಿಚಾರ ಕುರಿತು ನಗರದ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.


21ರಂದು ಬೆಳಗ್ಗೆ 10.30ಕ್ಕೆ ವಿಚಾರ ಸಂಕಿರಣಕ್ಕೆ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಚಾಲನೆ ನೀಡಲಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ.ಕಲ್ಲೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಆ.22ರಂದು ಸಂಜೆ 4.30 ಕ್ಕೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ವಿವಿಯ ಮಾನವಶಾಸ್ತ್ರ ಅಧ್ಯಯನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್.ಕೆ.ಭಟ್ ವಹಿಸಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಎಂ.ಮೇತ್ರಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.