ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಎಡಿಎಂ ಕೆ.ವಿ ಶ್ರುತಿ ಅಧ್ಯಕ್ಷತೆಯಲ್ಲಿ ನಡೆಯಿತು. 
ಜಿಲ್ಲೆ

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಸೌಮ್ಯ ಆರ್

ಕಾಸರಗೋಡು: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿತು.

ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಕೆ.ವಿ.ಶ್ರುತಿ ಅಧ್ಯಕ್ಷತೆ ವಹಿಸಿದ್ದರು. ಎಲ್ಲ ಸಾರ್ವಜನಿಕ ಸಂಸ್ಥೆಗಳು ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ಧೂಮಪಾನ ನಿಷೇಧದ ಸೂಚನೆ ಕಡ್ಡಾಯವಾಗಿ ಅಳವಡಿಸಲು ನಿರ್ದೇಶನ ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸ್ಥಳೀಯಾಡಳಿತ ಸಂಸ್ಥೆಗಳು ಮತ್ತು ಇತರ ಇಲಾಖೆಗಳ ಸಹಕಾರದೊಂದಿಗೆ ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ-2003) ಜಾರಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಅವಧಿ ಮೀರಿದ ಎಚ್ಚರಿಕೆ ಚಿತ್ರ ಲಗತ್ತಿಸುವ ಮೂಲಕ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅನುಮತಿ ನೀಡಲಾಗುವುದಿಲ್ಲ. ವಾಣಿಜ್ಯ ಕೇಂದ್ರಗಳು ಧೂಮಪಾನ ಉತ್ತೇಜಿಸುವ ಯಾವುದೇ ವಸ್ತು ನೀಡಬಾರದು ಮತ್ತು ಶಿಕ್ಷಣ ಸಂಸ್ಥೆಗಳಿಂದ 100 ಮೀ.ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರುವಂತೆ ಅಗತ್ಯ ಕ್ರಮಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಜಿಲ್ಲಾ ವೈದ್ಯಕೀಯ ಕಚೇರಿ ಎನ್‌ಟಿಸಿಪಿ ನೋಡಲ್ ಅಧಿಕಾರಿ ಡಾ.ಪ್ರಸಾದ್ ಥಾಮಸ್, ವಿಜಿಲೆನ್ಸ್ ಉಪ ಆಯುಕ್ತ ಪಿ.ಕೆ.ಜಯರಾಜನ್, ನಾರ್ಕೋಟಿಕ್ ಸೆಲ್ ಡಿವೈಎಸ್ಪಿ ಎಸ್.ಚಂದ್ರಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅವಿನಾಶ್ ಸುಂದರ್, ಕಾಸರಗೋಡು ಗಿರಿಜನ ಅಭಿವೃದ್ಧಿ ಅಧಿಕಾರಿ ಎಂ.ಮಲ್ಲಿಕಾ, ಹೆಲ್ತ್‌ಲೈನ್ ಎನ್‌ಜಿಒ ನಿರ್ದೇಶಕ ಮೋಹನನ್ ಮಂಗಾಟ್ ಉಪಸ್ಥಿತರಿದ್ದರು.