ಧಾರವಾಡ: ಚುನಾವಣೆಗಳು ಪ್ರಜಾತಂತ್ರದ ಜೀವಾಳ. ಚುನಾವಣೆ, ಜನಪ್ರತಿನಿಽಗಳ ಆಯ್ಕೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಲು ಮತದಾರರಲ್ಲಿ ಅವರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸಬೇಕು. ಮತದಾರರು ಆಮಿಷ, ಉಚಿತ ಉಡುಗೊರೆಗಳನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಽÃಶ ಪರಶುರಾಮ ಎಫ್. ದೊಡ್ಡಮನಿ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಗಳ ಸಮಯದಲ್ಲಿ ಉಚಿತ ಉಡುಗೊರೆ, ಹಣ, ಮದ್ಯ ಹಂಚಿಕೆಯ ಬಗ್ಗೆ ಎಚ್ಚರಿಕೆಯಿಂದ ಇದ್ದು, ಅವುಗಳನ್ನು ತಿರಸ್ಕರಿಸಬೇಕು. ಅವುಗಳನ್ನು ಹಂಚುವವರನ್ನು ವಿರೋಽಸಬೇಕು. ಎಲ್ಲ ಮತದಾರರು ಸ್ವಾಭಿಮಾನಿಗಳಾಗಿ ತಮ್ಮ ಮತದಾನದ ಹಕ್ಕನ್ನು ತಪ್ಪದೆ ಚಲಾಯಿಸಬೇಕು ಎಂದರು.
ಜಿಲ್ಲಾ ಚುನಾವಣಾ ರಾಯಬಾರಿ, ಪದ್ಮಶ್ರೀ ಪಂ. ಎಂ. ವೆಂಕಟೇಶಕುಮಾರ, ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಡಾ. ಎ. ಚನ್ನಪ್ಪ ಮಾತನಾಡಿದರು. ಮನಗುಂಡಿ ಗ್ರಾಮದ ಶತಾಯುಷಿ ಮತದಾರ ಬಸವಣ್ಣೆವ್ವ ಹುಂಬೇರಿ ವೇದಿಕೆಯಲ್ಲಿದ್ದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ ಮತದಾರರ ಪ್ರತಿಜ್ಞಾವಿಽ ಬೋಽಸಿದರು. ಉಪ ವಿಭಾಗಾಽಕಾರಿ ಶಾಲಂ ಹುಸೇನ್ ಸ್ವಾಗತಿಸಿದರು. ಕೆ.ಎಂ. ಶೇಖ್ ನಿರೂಪಿಸಿದರು. ತಹಸೀಲ್ದಾರ್ ದೊಡ್ಡಪ್ಪ ಹೂಗಾರ ವಂದಿಸಿದರು.
ಚುನಾವಣಾ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಿದ ವಿವಿಧ ಇಲಾಖೆಗಳ ಸಿಬ್ಬಂದಿಗೆ ಭಾರತ ಚುನಾವಣಾ ಆಯೋಗದ ಪರ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಯುವ ವಿಜ್ಞಾನಿ ಪ್ರಶಸ್ತಿ ಪುರಸ್ಕೃತರಾದ ಹುಬ್ಬಳ್ಳಿಯ ಗೋಕುಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಯುವ ವಿಜ್ಞಾನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.