ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು. 
ಜಿಲ್ಲೆ

ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಲಕ್ಷ ಗಿಡಗಳನ್ನು ನೆಡುವ ಯೋಜನೆಯಿದ್ದು, ಅರಣ್ಯ ಇಲಾಖೆ ಹಾಗೂ ಅರಣ್ಯ ಮಂತ್ರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ನಡೆದ ಹಸುರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘ ಅಧ್ಯಕ್ಷ ಅಶೋಕ್ ಕುವಾರ್ ಶೆಟ್ಟಿ ಮೈರ್ವಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ವಾಜಿ ಸದಸ್ಯ ಪ್ರತಾಪ್ ಹೆಗ್ಡೆ ವಾರಾಳಿ, ಪಡುಬಿದ್ರಿ ಸಹಕಾರಿ ವ್ಯವಸಾಯ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಕುವಾರ್, ಉಪವಲಯ ಅರಣ್ಯಾಧಿಕಾರಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಪೂಜಾರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಡಿ.ಶೆಟ್ಟಿ, ಕೊಕ್ಕರ್ಣೆ ರೋಟರಿ ಕ್ಲಬ್ ಅಧ್ಯಕ್ಷ ಕಾಶೀನಾಥ ಶೆಣೈ ಕಜ್ಕೆ, ಸಂದ ಉಪಾಧ್ಯಕ್ಷ ಪ್ರವೀಣ ಶೆಟ್ಟಿ ವಂಡಾರು, ನಿರ್ದೇಶಕರು ಉಪಸ್ಥಿತರಿದ್ದರು. ಪ್ರಭಾರ ಆಡಳಿತ ನಿರ್ದೇಶಕ ಅಭಿಷೇಕ್ ಸ್ವಾಗತಿಸಿ, ಶರತ್ ಹಿಲಿಯಾಣ ನಿರೂಪಿಸಿದರು.

ನಗದು ಬಹುಮಾನ, ಸನ್ಮಾನ

ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂ ವ್ಯಾಪ್ತಿಯ 7 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪರಿಸರ ಸ್ಪರ್ಧೆಯ ವಿಜೇತರಿಗೆ ನಗದು ಬಹುವಾನ ನೀಡಲಾಯಿತು. ಎಸ್.ಎಲ್.ಆರ್.ಎಂ. ರುದ್ರಭೂಮಿ ನಿರ್ವಾಹಕರನ್ನು ಗೌರವಿಸಿ, ಸಾಧಕ ಕೃಷಿಕರನ್ನು ಸನ್ಮಾನಿಸಲಾಯಿತು.