ಜಿಲ್ಲೆ

18ರಂದು 6ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Mangaluru - Hariprasad Rai



ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್ ಉಜಿರೆ, ಎಸ್‌ಡಿಎಂ ಗ್ರ್ೂ ಆ್ ಯೋಗ ಅಂಡ್ ನ್ಯಾಚುರೋಪಥಿ ಆಸ್ಪತ್ರೆ, ಸೆಂಟರ್ ಆ್ ಎಕ್ಸಲೆನ್ಸ್ ಾರ್ ಕ್ಲಿನಿಕಲ್ ರಿಸರ್ಚ್ ಸೆಂಟರ್ ಇನ್ ನ್ಯಾಚುರೋಪಥಿ ಅಂಡ್ ಯೋಗಿಕ್ ಸೈನ್ಸ್ ವತಿಯಿಂದ ಇಂಡಿಯನ್ ನ್ಯಾಚುರೋಪಥಿ ಅಂಡ್ ಯೋಗ ಗ್ರಾಜ್ಯುಯೇಟ್ಸ್ ಮೆಡಿಕಲ್ ಅಸೋಸಿಯೇಶನ್ ಮತ್ತು ದ.ಕ. ಜಿಲ್ಲಾಡಳಿತ ಸಹಯೋಗದಲ್ಲಿ 6ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ನ.18ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ದ.ಕ.ಸಂಸದ , ಶಾಸಕ ಡಿ. ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಆರೋಗ್ಯ ಇಲಾಖೆ ಅಧಿಕಾರಿ ಡಾ.ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಮಹಮ್ಮದ್ ಇಕ್ಬಾಲ್ ಅವರು ಭಾಗವಹಿಸಲಿದ್ದಾರೆ ಎಂದು ಎಸ್‌ಡಿಎಂ ಕಾಲೇಜ್ ಆ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್‌ನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ಬೆಳಗ್ಗೆ 9 ರಿಂದ ಸಾಯಂಕಾಲ 5ರವರೆಗೆ ಪೂರ್ಣ ಪ್ರಮಾಣದ ಮಧುಮೇಹ ಮತ್ತು ಪ್ರಕೃತಿ ಚಿಕಿತ್ಸೆಯ ಕಾರ್ಯಾಗಾರ ಆಯೋಜಿಸಲಾಗಿದೆ. ರಾಜ್ಯದ 8 ಪ್ರಕೃತಿ ಚಿಕಿತ್ಸಾ ಕಾಲೇಜುಗಳ ವಿದ್ಯಾರ್ಥಿಗಳು ಸಹಿತ 1200ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರಕೃತಿ ಚಿಕಿತ್ಸಾ ಕಾಲೇಜುಗಳಲ್ಲಿ ವಿಶೇಷ ಸಾಧನೆಗೈದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದೆಂದು ಅವರು ತಿಳಿಸಿದರು. ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಸುಜಾತ, ಡೀನ್ ಡಾ. ಗೀತಾ ಉಪಸ್ಥಿತರಿದ್ದರು.