ಬೆಳ್ತಂಗಡಿ: ಜೋಹಾನ್ಸ್ ಗುಟನ್‌ಬರ್ಗ್ ಯುನಿವರ್ಸಿಟಿ ಆಫ್ ಮೈನ್ಜ್‌ನ ಸ್ಪೋರ್ಟ್ಸ್ ಆಂಡ್ ಮೈಂಡ್ ಬಾಡಿ ಮೆಡಿಸಿನ್ ವಿಭಾಗದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಯೋಗ, ಪ್ರಕೃತಿ ಚಿಕಿತ್ಸಾ ತರಬೇತಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ನಡೆಯಿತು.
ಎಸ್‌ಡಿಎಂ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪದಕ ನೀಡಿ ಗೌರವಿಸಿದರು. ಕಾಲೇಜು ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಡೀನ್ ಡಾ. ಬಿಂದು ಶ್ರೀಧರ್, ಯೋಗ ವಿಭಾಗ ಉದಯ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.