ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಕಂಪನಮಹದೇಶ್ವರ ದೇಗುಲ ಉದ್ಘಾಟನೆ ಹಿನ್ನೆಲೆಯಲ್ಲಿ ಸೋಮವಾರ ಮಹಾಸಂಪ್ರೋಕ್ಷಣೆ, ಸ್ನಪನಾಭಿಷೇಕ ಹಾಗೂ ವಿಮಾನಗೋಪುರ ಕಲಶಾರೋಹಣ ಜರುಗಿತು.
ದೇಗುಲ ಉದ್ಘಾಟನೆ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸೋಮವಾರ ಪಡಗೂರು ಅಡವಿ ಮಠಾಧ್ಯಕ್ಷ ಶಿವಲಿಂಗೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ವಿಮಾನಗೋಪುರ ಕಲಶಾರೋಹಣ ನೆರವೇರಿತು.
ಪ್ರತಿ ವರ್ಷದಂತೆ ಕಡೇ ಕಾರ್ತಿಕ ಸೋಮವಾರದ ಅಂಗವಾಗಿ ಕಂಪನ ಮಹದೇಶ್ವರರ ಆರಾಧನೆ ನಡೆಸಿ, ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಸುತ್ತಲಿನ ಹತ್ತಾರು ಗ್ರಾಮಗಳ ಭಕ್ತರು ದೇಗುಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.