ರಟ್ಟಿಹಳ್ಳಿ: ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ವಾರ್ಷಿಕೋತ್ಸವ ನಿಮಿತ್ತ ವಿವಿಧ ಧಾರ್ವಿುಕ ಕಾರ್ಯಕ್ರಮ ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ಗಿರೀಶ ನಾಡಗೇರ ನೇತೃತ್ವದಲ್ಲಿ ನ. 18ರಂದು ಬೆಳಗ್ಗೆ 8 ಗಂಟೆಗೆ ನವಚಂಡಿ ಹೋಮ, ಕುಮಾರಿಕಾ ಪೂಜೆ, ಸುಹಾಸಿನಿ ಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಜರುಗಲಿದೆ. 19ರಂದು ಬೆಳಗ್ಗೆ 8 ಗಂಟೆಗೆ ದೇವಿಗೆ ಉಡಿ ತುಂಬುವುದು, ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ ಜರುಗಲಿದೆ ಎಂದು ದೇವಸ್ಥಾನ ಕಮಿಟಿ ಅಧ್ಯಕ್ಷ ಶ್ರೀನಿವಾಸ ಭೈರೋಜಿ ಮತ್ತು ಯಲ್ಲಪ್ಪ ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.