ಪುತ್ತೂರು ಗ್ರಾಮಾಂತರ: ದೇಯಿ ಬೈದ್ಯೆತಿ, ಕೋಟಿ-ಚೆನ್ನಯರ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ 9 ದಿನಗಳ ನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಬೆಳಗ್ಗೆ ಕ್ಷೇತ್ರದಲ್ಲಿ ಕ್ಷೇತ್ರದ ಶಿವಾನಂದ ಶಾಂತಿ ಅವರ ನೇತೃತ್ವದಲ್ಲಿ ಗಣಪತಿ ಹವನ ಹಾಗೂ ತೆನೆಕಟ್ಟುವ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮ, ಮಹಾಮಾತೆ ದೇಯಿ ಬೈದ್ಯೆತಿಗೆ ಪುಷ್ಪಾಲಂಕಾರ ಪೂಜೆಯ ಬಳಿಕ ನವರಾತ್ರಿ ಮಹೋತ್ಸವದ ಉದ್ಘಾಟನಾ ಸಮಾರಂಭ ನಡೆಯಿತು.
ಜಗನ್ನಾಥ್ ಬಂಗೇರ ಮುಗ್ಗಗುತ್ತು ಉದ್ಘಾಟಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಮೊಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ, ಪ್ರಮುಖರಾದ ಶಶಿಧರ್ ಕಿನ್ನಿಮಜಲು, ಜಯರಾಮ್ ಬಂಗೇರ, ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ, ನಾಗೇಶ್ ಬೈಕಂಪಾಡಿ, ಶಂಕರಿ ಪಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.