ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಶ್ರಧ್ಧಾಭಕ್ತಿಯಿಂದ ವಿವಿಧ ಪೂಜಾ ಕೈಂಕರ್ಯಗಳ ನಡುವೆ ಶ್ರೀ ಚಂಡಿಕಾ ಹೋಮ, ಮೃತ್ಯುಂಜಯ ಹೋಮ ಮಂಗಳವಾರ ನಡೆಯಿತು. ಬೆಳಗ್ಗೆ 8 ಗಂಟೆಯಿAದ ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಕೇರಳದ ತಂಡದವರಿAದ ನಡೆದು ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು. ಚಂಡಿಕಾ ಹೋಮ ಪೂಜಾ ಕಾರ್ಯಕ್ರಮದಲ್ಲಿ ಹುದುಗೂರು, ಹಾರಂಗಿ, ಕುಶಾಲನಗರ ಕೂಡಿಗೆ, ಕೂಡುಮಂಗಳೂರು ಮದಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಟಿ. ಎಂ. ಚಾಮಿ, ಉಪಾಧ್ಯಕ್ಷ ಎನ್.ಎಸ್. ಮುತ್ತಪ್ಪ, ಕಾರ್ಯದರ್ಶಿ ಬಿ.ಎಲ್. ಸುರೇಶ್, ಸೇರಿದಂತೆ ಸಮಿತಿಯ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.