ಮುಖ್ಯಮಂತ್ರಿ ಸಿದ್ದರಾಮಯ್ಯ  
ಜಿಲ್ಲೆ

ಪ್ರಚೋದನೆ ನೀಡುವುದು ಸಂವಿಧಾನಬಾಹಿರ: ಸಿದ್ದರಾಮಯ್ಯ

ಮೈಸೂರು: ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ ಎಂದರು.

ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳು ಮೊದಲು ಕಾಂಗ್ರೆಸ್‍ನಲ್ಲಿದ್ದು, ನಂತರ ಬಿಜೆಪಿಗೆ ಹೋಗಿ ಮುಖ್ಯಮಂತ್ರಿಗಳಾಗಿದ್ದಾರೆ. ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರನ್ನು ಮೆಚ್ಚಿಸಲೆಂದು ಈ ರೀತಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಲೋಪವಲ್ಲದೇ ಅವರ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಸೋತಿದೆ. ಹಾಗೂ ಇಂಥದ್ದಕ್ಕೆ ಪ್ರಚೋದನೆ ನೀಡುವುದು ಸಂವಿಧಾನಬಾಹಿರ ಎಂದರು.