ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಆಧುನಿಕ ಶಿಕ್ಷಣ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಡಾ.ಪಿ.ರಮಣ್ ಐತಾಳ್ ಅವರನ್ನು ಪ್ರೊ.ನಿತ್ಯಾನಂದ ಗೌರವಿಸಿದರು. ಸಂಜೀವ ನಾಯ್ಕ, ಶ್ರೀಕಾಂತ ರಾವ್ ಮೊದಲಾದವರು ಇದ್ದರು.  
ಜಿಲ್ಲೆ

ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಅಗತ್ಯ

ಇಂದಿರಾ ಎನ್ ಕೆ

ಪಡುಬಿದ್ರಿ: ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಮುಖ್ಯ ಎಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ ನಿರ್ದೇಶಕ, ಶಿಕ್ಷಣ ತಜ್ಞ ಡಾ.ಪಿ.ರಮಣ್ ಐತಾಳ್ ಹೇಳಿದರು.

ಅದಮಾರು ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸೋಮವಾರ ಆಧುನಿಕ ಶಿಕ್ಷಣ ಕುರಿತ ಮಾರ್ಗದರ್ಶನ ಕಾರ್ಯಕ್ರಮದ ದಿಕ್ಸೂಚಿ ಭಾಷಣದಲ್ಲಿ ಮಾತನಾಡಿದರು.

ಇಂದು ಉದ್ಯೋಗ ಜಗತ್ತಿನಲ್ಲಿ ಅತ್ಯಂತ ಸ್ಪರ್ಧೆ ಏರ್ಪಟ್ಟಿದೆ. ಹಳೆಯ ಶಿಕ್ಷಣ ಕ್ರಮದ ಬದಲಾಗಿ ಡಿಜಿಟಲ್ ತಂತ್ರಜ್ಞಾನ, ಕಂಪ್ಯೂಟರ್ ಬಳಕೆ ಹೆಚ್ಚಾಗುತ್ತಿದೆ. ಇದಕ್ಕೆ ಸರಿಯಾಗಿ ಶಿಕ್ಷಕರು ಪ್ರತಿಯೊಂದು ವಿಷಯದಲ್ಲೂ ಸಿದ್ಧರಾಗಬೇಕು ಎಂದು ಕರೆ ನೀಡಿದರು. ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಪ್ರತಿನಿಧಿ ಪ್ರೊ.ನಿತ್ಯಾನಂದ ಅವರು ಡಾ.ಪಿ.ರಮಣ ಐತಾಳ್ ಅವರನ್ನು ಗೌರವಿಸಿದರು. ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ ಎ.ವಿ., ಸಹ ಮುಖ್ಯ ಶಿಕ್ಷಕಿ ನಿಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಶ್ರೀಕಾಂತ ರಾವ್ ವಂದಿಸಿದರು.