Need to increase learning capacity  
ಜಿಲ್ಲೆ

ಕಲಿಕಾ ಸಾಮರ್ಥ್ಯ ವೃದ್ಧಿ ಅವಶ್ಯ

ಚಿಮ್ಮಡ: ಮಗುವಿನ ಕಲಿಕಾ ಸಾಮರ್ಥ್ಯ ವೃದ್ಧಿಗೆ ಕಲಿಕಾ ಹಬ್ಬ ಸಹಕಾರಿ ಎಂದು ಶಿಕ್ಷಣ ಸಂಯೋಜಕ ಬಿ.ಎಂ. ಹಳಮನಿ ಹೇಳಿದರು.

ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಅಜೀಂ ಪ್ರೇಮ್‌ಜಿ ೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಲಷ್ಟರ್‌ಮಟ್ಟದ ಎ್.ಎಲ್.ಎನ್. ಆಧರಿತ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿಆರ್‌ಪಿ ಸಮನ್ವಯ ಅಧಿಕಾರಿ ದ್ರಾಕ್ಷಾಯಿಣಿ ಮಂಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಕಲಿಕಾ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದುಪಯೋಗಪಡೆದುಕೊಳ್ಳಬೇಕು ಎಂದರು.

ಅಜೀಂ ಪ್ರೇಮ್‌ಜಿ ೌಂಡೇಷನ್ ಜಿಲ್ಲಾ ಸಂಯೋಜಕ ಅಡಿವೆಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಬಂಗಾರೆವ್ವ ಜಾಲಿಕಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಪ್ರಭು ದೇವಗೋಳ, ಗ್ರಾಪಂ ಉಪಾಧ್ಯಕ್ಷೆ ಪದ್ಮಾವತಿ ಭಜಂತ್ರಿ, ಅಭಿವೃದ್ಧಿ ಅಧಿಕಾರಿ ಶಿವಾನಂದ ಬಿರಾದಾರ, ರಾಜ್ಯ ಪರಿಷತ್ ಸದಸ್ಯರಾದ ಪ್ರಶಾಂತ ಹೊಸಮನಿ, ಬಸವರಾಜ ಹಣಗಂಡಿ, ಮುಖ್ಯಶಿಕ್ಷಕಿ ಎಂ.ಎಸ್. ಜಿಟ್ಟಿ, ಎಂ.ಎಸ್. ಹೊಸಮನಿ ಇತರರಿದ್ದರು.