ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ವಿಶ್ವ ದಿನಾಚರಣೆ ಹಾಗೂ ಮಕ್ಕಳ ಆರೊಗ್ಯ ತಪಾಸಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ ಉದ್ಘಾಟಿಸಿದರು. ಡಾ. ಸಂಜಯ ಕಡ್ಲಿಮಟ್ಟಿ, ಬಸವರಾಜ ಜಿಗಳೂರ, ಡಾ. ಜಾವೇದ ಬಾಗಾಯತ, ಕೆ. ಕೆ.ಚವಾಣ್ ಮತ್ತಿತರರಿದ್ದಾರೆ.  
ಜಿಲ್ಲೆ

ಅಪೌಷ್ಟಿಕತೆ ಕುರಿತು ಪಾಲಕರಲ್ಲಿ ಜಾಗೃತಿ ಅವಶ್ಯ; ಅರವಿಂದ ಹಗರಗಿ

ವಿಜಯಪುರ: ಮಕ್ಕಳಲ್ಲಿ ಕಂಡುಬರುತ್ತಿರುವ ಪೌಷ್ಟಿಕತೆಯ ಕೊರತೆ ಕುರಿತು ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ ಹೇಳಿದರು.

ನಗರದ ಬಿಎಲ್ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಸಹಯೊಗದೊಂದಿಗೆ ಶಿಶು ಅಭಿವೃದ್ಧಿ ಯೋಜನೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ವಿಶ್ವ ದಿನಾಚರಣೆ ಹಾಗೂ ಮಕ್ಕಳ ಆರೊಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಉಂಟಾಗುತ್ತಿದೆ. ಈ ಕುರಿತು ಜನ ಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗಳ ಮೂಲಕ ಹಾಗೂ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜನಸಾಮಾನ್ಯರಲ್ಲಿ ಆಯುರ್ವೆದಿಯ ಪೊಷಣಮುಕ್ತ ಆಹಾರ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾಗಿರುವ ಕೆಲಸ ಕಾರ್ಯಗಳಿಗೆ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಹೇಳಿದರು.

50 ಮಕ್ಕಳ ಆರೋಗ್ಯ ತಪಾಸಣೆ ಉಚಿತವಾಗಿ ನಡೆಸಿ ಔಷಧ ವಿತರಣೆ ಮಾಡಲಾಯಿತು. ಗರ್ಭಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಸಂಸ್ಕಾರ, ಪ್ರತಿ ತಾಯಿಗೊಂದು ಗಿಡ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾವಿದ್ಯಾಲಯದ ಶ್ರೀವನದಲ್ಲಿ ಸಸಿ ನೆಡಲಾಯಿತು.

ಬಸವರಾಜ ಜಿಗಳೂರ, ಡಾ. ಜಾವೇದ ಬಾಗಾಯತ, ಕೆ.ಕೆ. ಚವಾಣ್, ಡಾ. ಕೆ.ಎ. ಪಾಟೀಲ, ಅನಿಲ ಹಳ್ಳಿ, ಡಾ. ವಿಜಯಲಕ್ಷ್ಮಿ ಬೆನಕಟ್ಟಿ, ಡಾ. ದೌಲಬಿ ಚೌಧರಿ, ಹೈದರಖಾನ ಮತ್ತಿತರರಿದ್ದರು.