ಜಿಲ್ಲೆ

ಸಾಹಿತ್ಯ ಸಮ್ಮೇಳನದಲ್ಲಿ ಸಂಘಟನೆಗಳ ಕಡೆಗಣನೆ

ಗಜೇಂದ್ರಗಡ: ಪಟ್ಟಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ರಾಜಕೀಯ ವ್ಯಕ್ತಿಗಳಿಂದ ನಡೆಯುತ್ತಿದೆ. ಸಾಹಿತಿಗಳು, ಕನ್ನಡಪರ ಸಂಘಟನೆಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಕರ್ನಾಟಕ ಜನಪರ ಸೇವಾ ಸಮಿತಿ ಅಧ್ಯಕ್ಷ ಗಣೇಶ ಗುಗಲೋತ್ತರ ಆಪಾದಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು. ಎರಡು ವರ್ಷಗಳ ಹಿಂದೆಯೇ ಸಮ್ಮೇಳನದ ಸಮಿತಿಗಳನ್ನು ರಚಿಸಿದ್ದಾರೆ ಎಂದು ಅಧ್ಯಕ್ಷರು ಹೇಳುತ್ತಿದ್ದು, ಈ ಸಮಿತಿಗಳು ರಾಜಕೀಯ ವ್ಯಕ್ತಿಗಳಿಂದಲೇ ತುಂಬಿಕೊಂಡಿವೆ. ಸಮ್ಮೇಳನಕ್ಕೆ ಬೆರಳೆಣಿಕೆಯಷ್ಟು ದಿನಗಳು ಉಳಿದಿರುವಾಗ ಗೊಂದಲಗಳು ಸೃಷ್ಟಿಯಾಗುತ್ತಿವೆ. ಯಾವ ಕಾರ್ಯಕ್ರಮಗಳು ನಡೆಯಲಿವೆ. ಗೋಷ್ಠಿಗಳ ವಿವರ ಸೇರಿ ಅನೇಕ ಸಂಗತಿಗಳ ಬಗ್ಗೆ ಯಾರಿಗೂ ಮಾಹಿತಿ ಇಲ್ಲದಿರುವುದು ಖೇದಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.