ಸಾಂದರ್ಭಿಕ ಚಿತ್ರ 
ಜಿಲ್ಲೆ

ಮೂರು ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ಲೈಂಗಿಕ ದೌರ್ಜನ್ಯ!

ಶಿವಮೊಗ್ಗ: ಮೂರು ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯಾತನೇ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವೊಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಇಂದು ಇಂಥದ್ದೊಂದು ಲೈಂಗಿಕ ಕಿರುಕುಳ ನಡೆದಿದೆ.

ಆರೋಪಿ ಪದವಿ ಓದುತ್ತಿದ್ದು, ಗುರುವಾರ ಬೆಳಗ್ಗೆ ಮನೆ ಮುಂದೆ ಆಟ ಆಡುತ್ತಿದ್ದ ಬಾಲಕಿ ಪಕ್ಕದ ಮನೆಗೆ ಹೋದಾಗ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ಬಳಿಕ ಬಾಲಕಿಯ ತಾಯಿ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಸಂತ್ರಸ್ತೆಯನ್ನು ಶಿವಮೊಗ್ಗದ ಮಕ್ಕಳ ರಕ್ಷಣಾ ಘಟಕದ ವಶಕ್ಕೆ ಒಪ್ಪಿಸಲಾಗಿದೆ.