Oplus_131072 
ಜಿಲ್ಲೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ

ಎ. ಆರ್. ರಘುರಾಮ

ನಂಜನಗೂಡು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮೊದಲ ಆದ್ಯತೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ಹುಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ವಿವಿಧ ಬಡಾವಣೆಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ಕ್ಷೇತ್ರಕ್ಕೆ 5 ಕೋಟಿ ರೂ. ಅನುದಾನ ಮಂಜೂರಾಗಿದೆ. ಹುಲ್ಲಹಳ್ಳಿ ಗ್ರಾಮದಲ್ಲಿ ಈಗಾಗಲೇ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಿಸಿ ರಸ್ತೆ ಮತ್ತು ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದೀಗ ಹುಲ್ಲಹಳ್ಳಿಯಿಂದ ತಗಡೂರು ಮಾರ್ಗವಾಗಿ ಸಂತೆಮರಳ್ಳಿಗೆ ಉತ್ತಮ ರಸ್ತೆಯಾಗಲಿದೆ ಎಂದರು. ಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ನಂಜನಗೂಡಿನ ಸಮಗ್ರ ಅಭಿವೃದ್ಧಿಗೂ ವಿಶೇಷವಾಗಿ ಗಮನ ನೀಡುತ್ತೇನೆ. ಎಂದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷೆ ದೇವಮ್ಮ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಇತರರು ಇದ್ದರು.