ಕಲಬುರಗಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಟ್ಟಿರುವ ಎನ್ಐಎ ಕಲಬುರಗಿ ನಗರದಲ್ಲಿ ಪರಿಶೀಲನೆ ನಡೆಸುತ್ತಿದೆ.
ಕಲಬುರಗಿಯ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು. ರೈಲ್ವೆ ಸ್ಟೇಷನ್ ನಲ್ಲಿರುವ ಸಿಸಿಟಿವಿಗಳನ್ನ ಪರಿಶೀಲನೆ ಮಾಡುತ್ತಿರುವ ಎನ್ ಐ ಎ ತಂಡ.
ಬಳ್ಳಾರಿಯಿಂದ ನೇರವಾಗಿ ಬಸ್ ಮೂಲಕ ಕಲಬುರಗಿಗೆ ಆಗಮಿಸಿರುವ ಎನ್ ಐ ಎ ತಂಡ. ಸ್ಥಳೀಯ ಪೊಲೀಸರ ಜೊತೆಗೆ ಬೆಳಗ್ಗೆಯಿಂದಲು ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ.
ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಲಾಡ್ಜ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.