ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಾಗೂ ನಿಯಂತ್ರಣ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮುಂದುವರಿಕೆ ಆಗಿದ್ದು, ಆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೊಸ ಆದೇಶ ಹೊರಡಿಸಿದ್ದಾರೆ.
ರಾತ್ರಿ ಕರ್ಫ್ಯೂ ಜತೆಗೆ 144 ಸೆಕ್ಷನ್ (ನಿಷೇಧಾಜ್ಞೆ) ಸಹ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂದಿದ್ದಾರೆ.
ಉಳಿದಂತೆ ಕರ್ಫ್ಯೂ ವೇಳೆ ಅನವಶ್ಯಕವಾಗಿ ಜನರು ಓಡಾಡುತ್ತಿರುವುದು ಕಂಡು ಬಂದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದಿರುವ ಕಮಲ್ ಪಂತ್, ನೈಟ್ ಕರ್ಫ್ಯೂ ಸೆ. 27ರ ವರೆಗೂ ವಿಸ್ತರಣೆ ಮಾಡಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.