ಮಡಿಕೇರಿ:
2022-24 ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ 34 ಶಾಖೆಗಳ ಪೈಕಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ನೀಮಾ) ಕೊಡಗು ಶಾಖೆ ಪ್ರಥಮ ಸ್ಥಾನ ಪಡೆದಿದೆ. ರಾಣಿಬೆನ್ನೂರುವಿನಲ್ಲಿ ಈಚೆಗೆ ನಡೆದ ಎನ್.ಐ.ಎಂ.ಎ. ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.
ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಶ್ಯಾಮ ಪ್ರಸಾದ್, ಕೊಡಗು ಜಿಲ್ಲಾ ಅಧ್ಯಕ್ಷ ಡಾ. ರಾಜಾರಾಮ ಪ್ರಶಸ್ತಿ ಪಡೆದುಕೊಂಡರು. ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಕೊಡಗು ಘಟಕದ ಅಧ್ಯಕ್ಷ ಡಾ. ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.