ಕಂಪ್ಲಿ ಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ಪ್ರಮುಖ ಕೆ.ಮಲ್ಲಿಕಾರ್ಜುನರೆಡ್ಡಿ ಮಾತನಾಡಿದರು.  
ಜಿಲ್ಲೆ

ನಿರ್ಭೀತಿಯಿಂದ ಮತ ಚಲಾಯಿಸಿ - ಚುನಾವಣಾಧಿಕಾರಿ ಡಾ.ನಯನ ಸಲಹೆ

ಶಶಿಧರ ಎಲ್

ಕಂಪ್ಲಿ: ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಚುನಾವಣಾಧಿಕಾರಿ ಡಾ.ನಯನಾ ಹೇಳಿದರು.

ಪಟ್ಟಣದಲ್ಲಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ಪುರಸಭೆ ಆಶ್ರಯದಲ್ಲಿ ಮತದಾನದ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಅಂಗವಿಕಲರ ತ್ರಿಚಕ್ರ ಹಾಗೂ ಸರ್ಕಾರಿ ನೌಕರರ ಬೈಕ್ ಜಾಥಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸಬೇಕಿದೆ ಎಂದರು.

ತಾಪಂ ಇಒ ಕೆ.ಎಸ್.ಮಲ್ಲನಗೌಡ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿಟಿ ಬಿ.ರವೀಂದ್ರಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಬಸವರಾಜ್, ಇಸಿಒ ಜಿ.ವೀರೇಶ್, ಸಿಆರ್‌ಪಿಗಳಾದ ರೇಣುಕಾರಾಧ್ಯ, ಭೂಮೇಶ್ವರ, ಹನುಮಂತಪ್ಪ, ವೀರೇಶ್, ಸುರೇಶ್ ಸೇರಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.