ಕಾರ್ಕಳ: ಬೆಳಗಾವಿಯಲ್ಲಿ ಇತ್ತೀಚೆಗೆ ಲೋಕಮಾನ್ಯ ಮ್ಯಾರಥಾನ್‌ನಲ್ಲಿ ನಿಟ್ಟೆ ಶಾಲೆ ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ.
ನಿಟ್ಟೆ ಡಾ.ಎನ್.ಎಸ್.ಎ.ಎಂ ಕನ್ನಡ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿನಿ ದೀಕ್ಷಿತಾ ಗಣಪತಿ ನಾಯ್ಕ 17 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ ಚಿನ್ನ, ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ 3ನೇ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಆಚಾರ್ಯ 5 ಕಿ.ಮೀ ಮುಕ್ತ ವಿಭಾಗದಲ್ಲಿ ಬೆಳ್ಳಿ, ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿ ರಕ್ಷಿತ್ ಆರ್.ಬಂಗೇರ 17 ವರ್ಷದೊಳಗಿನ ಬಾಲಕರ 5 ಕಿ.ಮೀ ಓಟದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ನಿಟ್ಟೆ ಡಾ.ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ 14 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ 4ನೇ ಸ್ಥಾನ ಪಡೆದಿದ್ದಾರೆ.