ವಿಜಯಪುರ ಜಿಪಂ ಸಭಾಂಗಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.  
ಜಿಲ್ಲೆ

ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ : ಸಚಿವ ಕೆ.ಜೆ.ಜಾರ್ಜ್

ಬಾಬುರಾವ ಯಡ್ರಾಮಿ

ರಾಜ್ಯ ಬಿಜೆಪಿ ಗೊಂದಲದ ಗೂಡು : ಹೀಗಾಗಿ ಕಾಂಗ್ರೆಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ರಾಜ್ಯ ಬಿಜೆಪಿ ಗೊಂದಲ ಗೂಡಾಗಿದೆ. ಹೀಗಾಗಿ ಕಾಂಗ್ರೆಸ್ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಜನರನ್ನು ದಾರಿತಪ್ಪಿಸಲು ನೋಡುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕಲಬುರಗಿಯಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಪವರ್ ಶೇರಿಂಗ್ ವಿಚಾರ ಅಲ್ಲಗಳೆದು, ಈ ಬಗ್ಗೆ ಹೈಕಮಾಂಡ್ ಏನಾದರೂ ಮಾಹಿತಿ ನೀಡಿದೆಯಾ, ಇತ್ತೀಚಿಗೆ ನಡೆದ ಸಿಎಲ್‌ಪಿ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಗೊಂದಲ ಏರ್ಪಟ್ಟಿದೆ. ಹೀಗಾಗಿ ಕಾಂಗ್ರೆಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ಪP್ಷÀದಲ್ಲಿ ಸದ್ಯ ತ್ಯಾಗದ ವಿಚಾರ ಚರ್ಚೆ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ಮಹಾತ್ಮಾ ಗಾಂಧಿಯಿ0ದ ಹಿಡಿದು ಸೋನಿಯಾ ಗಾಂಧಿವರೆಗೆ ಕಾಂಗ್ರೆಸ್ ಪP್ಷÀಕ್ಕಾಗಿ ಅನೇಕರು ತ್ಯಾಗ ಮಾಡಿz್ದÁರೆ. ಕಾಂಗ್ರೆಸ್ ಪP್ಷÀದಲ್ಲಿ ಲಕ್ಷಾಂತರ ಜನ ತ್ಯಾಗ ಮಾಡಿದವರಿz್ದÁರೆ ಎಂದರು.

ಸತೀಶ ಜಾರಕಿಹೊಳಿಗೆ ಪರ್ಯಾಯವಾಗಿ ಶ್ರೀರಾಮಲುರನ್ನು ಕರೆತರಲು ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂಬ ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿಕೆಗೆ ತಿರುಗೇಟು ನೀಡಿದ ಜಾರ್ಜ್, ನಮ್ಮ ಪP್ಷÀದ ಬಗ್ಗೆ ಮಾತಾಡಲು ಜನಾರ್ದನ ರೆಡ್ಡಿಗೆ ಅಧಿಕಾರ ಕೊಟ್ಟವರು ಯಾರು ? ಬಳ್ಳಾರಿಯನ್ನ ರಿಪಬ್ಲಿಕ್ ಮಾಡಿದವರು ಈ ಜನಾರ್ಧನ ರೆಡ್ಡಿ. ಅವರು ಏನೆಲ್ಲ ಮಾಡಿz್ದÁರೆ ಎನ್ನುವ ಬಗ್ಗೆ ನನಗಿಂತ ಚೆನ್ನಾಗಿ ನಿಮಗೆ ಗೊತ್ತಿದೆ. ಈಗ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ. ನಾನೇನು ಹೇಳಲಿ ಎಂದರು.

ಶ್ರೀರಾಮಲು ಕಾಂಗ್ರೆಸ್‌ಗೆ ಬರುವ ವಿಚಾರ ನನಗೆ ಗೊತ್ತಿಲ್ಲ. ಆ ವಿಚಾರದ ಬಗ್ಗೆ ನಾನೇನೂ ಮಾತನಾಡಲಾರೆ ಎಂದು ಹೇಳಿದರು.