ಬೆಂಗಳೂರು: ಕರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲ್ಲ, ಜನರು ಆತಂಕಗೊಳ್ಳುವುದು ಬೇಡವೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಜನರು ಭಯ-ಭೀತಿ ಬಿಟ್ಟು ಜಾಗ್ರತೆಯಿಂದ ಇದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸಿದರೆ ಸೋಂಕು ದೂರವಾಗಲಿದೆ ಎಂದು ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ವಚ್ವತೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಕಾಯ್ದುಕೊಂಡು ಸೋಂಕು ನಿಯಂತ್ರಿಸಲು ಸರ್ಕಾರಕ್ಕೆ ಸಹಕರಿಸಬೇಕು ಎಂದರು.
ಬೆಂಗಳೂರಿನಲ್ಲೇ ಇರಿ
ಲಾಕ್ಡೌನ್ ಮಾಡುತ್ತಾರೆ ಎಂಬ ಭಯದಿಂದ ಬೆಂಗಳೂರು ಬಿಟ್ಟು ಹೋಗಬೇಡಿ. ಇಲ್ಲಿಯೇ ಇರಿ ಸುರಕ್ಷಿತವಾಗಿರಿ. ಈಗಾಗಲೇ ಮುಖ್ಯಮಂತ್ರಿಗಳು ಮತ್ತೆ ಲಾಕ್ ಡೌನ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಯಾರೊಬ್ಬರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಆತ್ಮಸ್ಥೈರ್ಯ ತುಂಬಿದ್ದಾರೆ.