ವಿಜಯಪುರ:ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಹೇಳಿದರು.ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ನರ್ಸಿಂಗ್ ಕಾಲೇಜು ಮತ್ತು ಮನೋಜ್ಯೋತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನಸಿಕ ಕಾಯಿಲೆಗೆ ಉಚಿತ ಚಿಕಿತ್ಸೆ, ಆಪ್ತ ಸಮಾಲೋಚನೆ ಮೂಲಕ ಪರಿಹಾರ ನೀಡಲಾಗುತ್ತಿದ್ದು, ಜನತೆ ಇದರ ಸೌಲಭ್ಯ ಪಡೆದು ಜೀವನ ಶೈಲಿಯಲ್ಲಿ ಬದಲಾವಣೆ ತಂದುಕೊಂಡು ಮಾನಸಿಕವಾಗಿ ಆರೋಗ್ಯವಂತರಾಗಿ ಬಾಳಬೇಕು ಎಂದು ಸಲಹೆ ನೀಡಿದರು.ಹಿರಿಯ ಮನೋರೋಗ ತ ಡಾ. ಸಿ.ಆರ್. ಚಂದ್ರಶೇಖರ ಮಾತನಾಡಿ, ಮಾನಸಿಕ ರೋಗಗಳನ್ನು ಚಿಕಿತ್ಸೆ ನೀಡಿ ಗುಣಪಡಿಸಬಹುದು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕೇಂದ್ರಗಳನ್ನು ಪ್ರಾರಂಭಿಸಿ ಚಿಕಿತ್ಸಾ ಸೌಲಭ್ಯಗಳನ್ನು ನೀಡುತ್ತಿದ್ದು, ಈ ಸೌಲಭ್ಯಗಳ ಅರಿವು ರೋಗಿಗಳಿಗೆ ಮೂಡಿಸುವುದು ದಿನಾಚರಣೆ ಉದ್ದೇಶವಾಗಿದೆ ಎಂದರು.
ಡಿಎಚ್ಒ ಡಾ. ಸಂಪತ್ತ ಗುಣಾರಿ ಮಾತನಾಡಿ, ರಾಜ್ಯ ಸರ್ಕಾರ 2014ರಲ್ಲಿ ಮನೋಚೈತನ್ಯ ಕ್ಲಿನಿಕ್ ಎಂಬ ಕಾರ್ಯಕ್ರಮ ಪ್ರಾರಂಭಿಸುವ ಮೂಲಕ ಪ್ರತಿ ಮಂಗಳವಾರ ತಾಲೂಕು ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಆರೈಕೆ ಕುರಿತಾಗಿ ಶಿಬಿರಗಳನ್ನು ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.
ಮನೋರೋಗ ತ ಡಾ. ಮಂಜುನಾಥ ಮಸಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ನಡೆದ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಮೂರ್ಲನಾ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಜಾನ್ ಕಟವಟೆ, ಮನೋರೋಗ ತ ಡಾ. ಚೌಕಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೋಲೂರ, ಸುರೇಶ ಹೊಸಮನಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕೆ.ಬಿ. ಬಾಗವಾನ, ಮತ್ತಿತರರಿದ್ದರು. ಎನ್.ಆರ್, ಬಾಗವಾನ ಸ್ವಾಗತಿಸಿದರು. ರವಿ ಕಿತ್ತೂರ ನಿರೂಪಿಸಿದರು.
ವಿಜಯಪುರದ ಸಿದ್ಧೇಶ್ವರ ದೇವಸ್ಥಾನದ ಎದುರು ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಡಾ. ಸಿ.ಆರ್. ಚಂದ್ರಶೇಖರ, ಡಾ. ಸಂಪತ್ತ ಗುಣಾರಿ, ಡಾ. ಮಂಜುನಾಥ ಮಸಳಿ ಮತ್ತಿತರರಿದ್ದಾರೆ.