ಜಿಲ್ಲೆ

ಗಾಂಧಿ ಮೈದಾನದಲ್ಲಿ ವಾಹನ ನಿಲುಗಡೆಗೆ ಕಡಿವಾಣ

ಸುನಿಲ್ ಪೊನ್ನೇಟಿ

ಮಡಿಕೇರಿ:

ನಗರದ ಗಾಂಧಿ ಮೈದಾನದ ಒಳಗೆ ವಾಹನ ನಿಲುಗಡೆಗೆ ನಗರಸಭೆ ವತಿಯಿಂದ ಕಡಿವಾಣ ಹಾಕಲಾಗಿದೆ. ಗಾಂಧಿ ಮೈದಾನದ ಒಳಗೆ ಭಾರಿ ವಾಹನ ಗಳನ್ನು ನಿಲ್ಲಿಸಿ ಅದೇ ಸ್ಥಳದಲ್ಲಿ ಅಡುಗೆ ಮಾಡಿ ವಾತಾವರಣವನ್ನು ಕಸದ ಕೊಂಪೆಯಾಗಿ ಮಾಡುತಿದ್ದ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ನಗರಸಭೆ ಅಧ್ಯಕ್ಷೆ ಕಲಾವತಿ ಮತ್ತು ಉಪಾಧ್ಯಕ್ಷ ಮಹೇಶ್ ಜೈನಿ ಮೇಲ್ವಿಚಾರಣೆಯಲ್ಲಿ ಇಲ್ಲಿ ಗುರುವಾರ ಕಬ್ಬಿಣದ ಬೇಲಿ ಅಳವಡಿಸಲಾಗಿದೆ. ದಸರಾ ಸೇರಿದಂತೆ ವಿಶೇಷ ಸಂದರ್ಭದಲ್ಲಿ ಈ ಕಬ್ಬಿಣದ ಬೇಲಿಯನ್ನು ತೆರವುಗೊಳಿಸಿ ನಂತರ ಮತ್ತೆ ಅಳವಡಿಸುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಈ ವ್ಯಾಪ್ತಿಯ ಶಾಲಾ ಮಕ್ಕಳಿಗೂ ಪ್ರಯೋಜನ ಆಗಲಿದೆ ಎಂದು ಮಹೇಶ್ ಜೈನಿ ತಿಳಿಸಿದ್ದಾರೆ.