ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಲೋಕೋಪಯೋಗಿ ರಸ್ತೆಗಳ ಬದಿಗಳಲ್ಲಿ ತಾತ್ಕಾಲಿಕವಾಗಿ ಚಪ್ಪರ, ಶೀಟ್ ಹಾಕಿ ವ್ಯಾಪಾರ ವಾಡಲು ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಆದರೆ ತಳ್ಳುಗಾಡಿ ಅಥವಾ ಅಂದಂದೇ ಸರಕುಗಳನ್ನು ತಂದು ಹೋಗುವ ವ್ಯಾಪಾರಿಗಳಿಗೆ ತೊಂದರೆ ಕೊಡಬೇಡಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಬುಧವಾರ ನಡೆದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ ಅನಾವೃಷ್ಟಿ ಕುರಿತ ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮುಂಬರುವ ಮಳೆಗಾಲದಲ್ಲಿ ಸಂಭವನೀಯ ಗುಡ್ಡ ಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿತೀರ, ಮುಳುಗಡೆ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಮಳೆಹಾನಿ, ಮನೆ ಕುಸಿತ, ಕಾಡುಪ್ರಾಣಿಗಳ ದಾಳಿ ಸೇರಿದಂತೆ ವಿವಿಧ ಪ್ರಾಕೃತಿಕ ಟನೆಗಳು ಸಂಭವಿಸಿದಾಗ ಸಂತ್ರಸ್ತರಿಗೆ ಪರಿಹಾರ ನೀಡಲು ದಾಖಲೆಗಳ ಕೊರತೆಯ ನೆಪವೊಡ್ಡಿ ಪರಿಹಾರ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದೆ. ಟನೆಗಳು ನಡೆದಿರುವುದು ವಾಸ್ತವ ಆಗಿದ್ದರೂ ಸಾರ್ವಜನಿಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಟನೆಗಳ ಬಗ್ಗೆ ಆಯಾಯ ಸ್ಥಳಗಳಿಗೆ ಭೇಟಿ ನೀಡಿ ದಢೀಕರಿಸಿ ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ಖಾದರ್ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಪಂಚಾಯಿತಿ ಡೋರ್ ನಂಬರ್ ದಾಖಲೆಗಳನ್ನು ಸಲ್ಲಿಸಿದ ನಂತರವೂ ವಾಸ ಯೋಗ್ಯ ಪ್ರವಾಣ ಪತ್ರ ಕೇಳುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪಿಸುತ್ತಿದ್ದಾರೆ. ಇದರಿಂದ ವಿದ್ಯುತ್ ಸಂಪರ್ಕ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಮನೆ ನಿರ್ಮಿಸಿದ ನಂತರ ಗ್ರಾಮ ಪಂಚಾಯಿತಿ ಸಿ.ಸಿ. ಪಡೆದು ವಿದ್ಯುತ್ ಸಂಪರ್ಕ ನೀಡುವಂತೆ ಸೂಚಿಸಿದರು.
ಗ್ರಾಮ ಪಂಚಾಯಿತಿಗಳು ಬೀದಿ ನಾಯಿಗಳ ಸಮೀಕ್ಷೆ ವಾಡಿ ಅವುಗಳ ನಿರ್ವಹಣೆಗೆ ಪ್ರತ್ಯೇಕ ನಿಧಿ ಮೀಸಲಿಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ತೆರವುಗೊಳಿಸಬೇಕು. ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ, ತಹಸೀಲ್ದಾರ್ ಪುಟ್ಟರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುದತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಒ ಉಪಸ್ಥಿತರಿದ್ದರು.
ಎಲ್ಲ ಪ್ರಮುಖ ರಸ್ತೆಗಳು ಸುಸಜ್ಜಿತವಾಗಲಿ
ಐದು ವರ್ಷಕ್ಕೊಮ್ಮೆ ನಡೆಯುವ ಉಳ್ಳಾಲ ಉರುಸ್ ಈ ತಿಂಗಳಲ್ಲಿ ಆರಂಭವಾಗಲಿದ್ದು, ಎಲ್ಲ ಪ್ರಮುಖ ರಸ್ತೆಗಳನ್ನು ಸುಸಜ್ಜಿತಗೊಳಿಸಬೇಕು. ತೊಕ್ಕೊಟ್ಟು - ಮುಡಿಪು ರಸ್ತೆಯ ಚತುಷ್ಪಥ ಕಾಮಗಾರಿ ಮುಗಿದ ನಂತರ ಚರಂಡಿ, ಫುಟ್‌ಪಾತ್ ಮತ್ತಿತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಸಜೀಪ-ತುಂಬೆ ನಡುವೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸಲು ಯು.ಟಿ.ಖಾದರ್ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಭವಿಷ್ಯದ 30 ವರ್ಷಗಳ ಜನಸಂಖ್ಯೆ ಗಮನದಲ್ಲಿಟ್ಟುಕೊಂಡು ನಡೆಸಬೇಕು. ಯಾವುದೇ ಯೋಜನೆಯಲ್ಲಿ ಮನೆ ಮನೆಗೆ ನಳ್ಳಿ ನೀರಿನ ಸಂಪರ್ಕ ನೀಡಲು ಸಾರ್ವಜನಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್‌ಲೈನ್ ಅಳವಡಿಕೆ ಮತ್ತು ಟ್ಯಾಂಕ್ ನಿರ್ವಾಣ ಕಾಮಗಾರಿಯಲ್ಲಿ ಕಂಡು ಬಂದಿರುವ ಸಮಸ್ಯೆಗಳನ್ನು ಪರಿಹರಿಸಲು ಮುಂದಿನ 15 ದಿನಗಳೊಳಗೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯು.ಟಿ.ಖಾದರ್, ವಿಧಾನಸಭಾಧ್ಯಕ್ಷ