ಜಿಲ್ಲೆ

ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿಲ್ಲ

ಅವಿನಾಶ್ ಜೈನಹಳ್ಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿಲ್ಲ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವ ಸ್ವಾಮಿ ಎಂದು ಆರೋಪಿಸಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳನ್ನು ಸಾಧನೆ ಎಂದು ಬಿಂಬಿಸಿಕೊಂಡು ಬಜೆಟ್ ಮಂಡಿಸಲಾಗಿದ್ದು, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಒಲೈಕೆಗಾಗಿ ಬರೀ ಸುಳ್ಳು ಆಶ್ವಾಸನೆಗಳನ್ನೇ ಬಜೆಟ್‌ನಲ್ಲಿ ಮಂಡಿಸಲಾಗಿದೆ ಎಂದು ಹೇಳಿಕೆಯಲ್ಲಿ ದೂರಿದ್ದಾರೆ.

ರಾಜ್ಯ ಸರಕಾರ ತನ್ನ ವೈಲ್ಯಗಳನ್ನು ಮುಚ್ಚಿಕೊಳ್ಳಲು ಬರೀ ಸುಳ್ಳಿನ ಸರಮಾಲೆಯೇ ಈ ಬಜೆಟ್‌ನಲ್ಲಿ ಇದೆ. ಚುನಾವಣೆಗೋಸ್ಕರ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ನೀರಾವರಿಗೆ ಸಂಪೂರ್ಣ ಅನ್ಯಾಯ ಮಾಡಿದ್ದಾರೆ. ಎಸ್ಸಿ ಎಸ್ಟಿಗಳಿಗೆ ಮೋಸದ ಬಜೆಟ್, ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರಿಗೆ ಶೂನ್ಯ ಬಜೆಟ್ ಆಗಿದೆ. ರಾಜ್ಯದ ಇತಿಹಾಸದಲ್ಲಿ ಪ್ರತಿಪಕ್ಷ ಸಭಾತ್ಯಾಗ ಮಾಡುವ ಪರಿಸ್ಥಿತಿಗೆ ರಾಜ್ಯ ಸರಕಾರ ಬಂದಿದೆ ಎಂದು ಕಿಡಿಕಾರಿದರು.

ಕಳೆದ ಬಾರಿ ಬಜೆಟ್‌ನಲ್ಲಿ ಮೈಸೂರು ಭಾಗದ ಅಭಿವೃದ್ದಿಗೆ ಘೋಷಣೆ ಮಾಡಿದ ಯೋಜನೆಗಳೇ ಜಾರಿಯಾಗಿಲ್ಲ. ಈಗ ಮತ್ತೇ ಸುಳ್ಳಿನ ಭರವಸೆಯನ್ನೇ ನೀಡಲಾಗಿದೆ ಎಂದು ದೂರಿದ್ದಾರೆ.