ಜಿಲ್ಲೆ

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಇಲ್ಲ: ಸಂಸದ ಪಿ.ಸಿ.ಮೋಹನ್

ಶಿರಾ: ಬಿಜೆಪಿಯಲ್ಲಿ ಟಿಕೆಟ್ ಬಗ್ಗೆ ಯಾವುದೇ ಗೊಂದಲವಿಲ್ಲ, ಹೈಕಮಾಂಡ್ ಯಾರನ್ನೇ ಅಭ್ಯರ್ಥಿ ಎಂದು ಘೋಷಿಸಿದರೂ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಾರೆ ಎಂದು ಸಂಸದ ಪಿ.ಸಿ.ಮೋಹನ್ ಹೇಳಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ತಾಲೂಕಿನಲ್ಲಿ ಪ್ರವಾಸ ಕೈಗೊಂಡ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜನತೆ ಬದಲಾವಣೆ ಬಯಸಿದ್ದು ಪಕ್ಷದ ಪರವಾದ ವಾತಾವರಣ ಕಂಡು ಬರುತ್ತಿದೆ. ಹಾಗಾಗಿ, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಇಲ್ಲಿಂದ ವಿಧಾನಸಭೆಗೆ ಬಿಜೆಪಿ ಶಾಸಕರನ್ನು ಕಳುಹಿಸಿಕೊಡುವುದರಲ್ಲಿ ಅನುಮಾನವಿಲ್ಲ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ನಗರಮಂಡಲ ಅಧ್ಯಕ್ಷ ವಿಜಯರಾಜು, ಶ್ರೀಧರಮೂರ್ತಿ, ಮಾಜಿ ಅಧ್ಯಕ್ಷ ಬಿ.ಗೋವಿಂದಪ್ಪ, ಲಕ್ಷ್ಮೀನಾರಾಯಣ, ಕೃಷ್ಣಮೂರ್ತಿ, ಗಿರಿಧರ್, ನಿರಂಜನ್, ರಘು, ಶ್ರೀನಿವಾಸ್, ಬಸವರಾಜು, ಹನುಮಂತಾಯ್ಕ, ಸಿ.ಕರಿಯಣ್ಣ, ಗೋವಿಂದರಾಜು ಹಾಗೂ ಬಲಿಜ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿ ಫೈನಲ್ ಇಂದು?!: ಬೈಎಲೆಕ್ಷನ್ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಶಿರಾಕ್ಕೆ ಭೇಟಿ ನೀಡುತ್ತಿದ್ದು ಅಭ್ಯರ್ಥಿ ಘೋಷಣೆ ಮಾಡುತ್ತಾರೆಯೇ ಎಂಬ ಕುತೂಹಲ ಮೂಡಿದೆ. ಸಮರ್ಥ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ಡಾ.ಸಿ.ಎಂ.ರಾಜೇಶ್‌ಗೌಡ ಜತೆ ಈಗಾಗಲೇ ನಳಿನ್ ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದು ಅವರನ್ನೇ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.