ಜಿಲ್ಲೆ

ಓದುವ ವಯಸ್ಸಲ್ಲಿ ದುಡಿಮೆ ಸಲ್ಲ

ಕೋಲಾರ ಡೆಸ್ಕ್

ಕೋಲಾರ: ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ಸಂಪೂರ್ಣ ನಿಮೂರ್ಲನೆ ಮಾಡಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಮಕ್ಕಳು ಶಿಕ್ಷಣದ ಜತೆಗೆ ಉತ್ತಮ ಸಂಸತಿ ಹಾಗೂ ಸಂಸ್ಕಾರಗಳನ್ನು ಕಲಿಸಬೇಕೆಂದು ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್​.ನಟೇಶ್​ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸಹಯೋಗದಿಂದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

14 ವರ್ಷದ ಒಳಗಿನ ಮಕ್ಕಳಿಗೆ ಆಟ, ಪಾಠ, ಊಟ, ನಿದ್ದೆ, ಈ ನಾಲ್ಕು ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿದಲ್ಲಿ ಆರೋಗ್ಯಕರ ಬೆಳವಣಿಗೆ ಮೂಲಕ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ. ಅತಿ ಕಡಿಮೆ ಸೌಲಭ್ಯಗಳನ್ನು ಪಡೆದು ಅತ್ಯುನ್ನತ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಅನಿಷ್ಠ ಪದ್ಧತಿಗಳಿಂದ ದೂರ ಇರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಚಿಕ್ಕವಯಸ್ಸಿಗೆ ಮಕ್ಕಳನ್ನು ದುಡಿಮೆಗೆ ಕಳುಹಿಸಿದರೆ ಕುಟುಂಬ ಹಾಗೂ ಅವರ ಜೀವನದ ಮೇಲೆ ಬೀರುವ ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳು ಶಿಕ್ಷಣ ಹೊರತುಪಡಿಸಿ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಬಾಲ ಕಾರ್ಮಿಕ ಪದ್ಧತಿಗೆ ಒಳಪಟ್ಟವರು ಎಂದು ಪರಿಗಣಿಸಲಾಗುತ್ತದೆ. ಈ ಅಪರಾಧಕ್ಕೆ ಕಾರಣವಾಗುವ ದುಡುಮೆಗೆ ನೇಮಿಸಿಕೊಂಡಿರುವ ಮಾಲೀಕರು ಶಿಕ್ಷಾರ್ಹರಾಗಿ ದಂಡಕ್ಕೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಮಂಗಳಾ ಮಾತನಾಡಿ, ಬಾಲ್ಯ ವಿವಾಹಗಳು ಸಹ ಕಾನೂನು ಬಾಹಿರವಾಗಿದೆ. ಇಂತಹ ಪ್ರಕರಣಗಳನ್ನು ಯಾರಾದರೂ ಕಂಡಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡುವ ಮೂಲಕ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ರವಿಶಂಕರ್​ ಮಾತನಾಡಿ, ಈ ಹಿಂದೆ ಸಮಾಜದಲ್ಲಿ ಬಹುತೇಕ ಬಡತನದಲ್ಲಿದ್ದವರು ಶ್ರೀಮಂತರ ಬಳಿ ವಿವಿಧ ಕಾರಣಗಳಿಗೆ ಸಾಲ ಪಡೆದು ತೀರಿಸಲಾಗದೆ ಬಡ್ಡಿ, ಚಕ್ರಬಡ್ಡಿಗಳಿಗೆ ತುತ್ತಾಗಿ ದುಡಿಮೆ ಹಣ ಸಾಕಾಗದೆ ತಮ್ಮ ಮಕ್ಕಳನ್ನು ಸಹ ದುಡಿಮೆಗೆ ಒಳ ಪಡಿಸುವ ಮೂಲಕ ಜೀತಾದಾಳುಗಳಾಗಿ ಮಾಡುತ್ತಿದ್ದರು ಎಂದು ಸ್ಮರಿಸಿದರು.

ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಂ.ಮುನೇಗೌಡ ಮಾತನಾಡಿ, ವಿಶ್ವದೆಲ್ಲೆಡೆ ಬಾಲ ಕಾರ್ಮಿಕ ವಿರೋಧಿಯ ಹೋರಾಟದ ಫಲವಾಗಿ ಕಾನೂನುಗಳಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ಕಾನೂನು ಬಾಹಿರವಾದ ಅಪರಾಧವೆಂದು ಘೋಷಿಸಲಾಗಿದೆ. ಸಾಮಾನ್ಯವಾಗಿ ಹೋಟೆಲ್​. ವರ್ಕ್​ಶಾಪ್​, ಬಟ್ಟೆ ಅಂಗಡಿ, ಇಟ್ಟಿಗೆ ಕಾರ್ಖಾನೆ, ಕಟ್ಟಣ ನಿಮಾರ್ಣ, ಇತ್ಯಾದಿಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಕಾನೂನು ಉಲ್ಲಂಘನೆಯಾಗಲಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷಿ$್ಮ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ವಿ.ನಾಗರತ್ನ, ವಕೀಲ ಸತೀಶ್​, ಗಮನ ಸಂಸ್ಥೆಯ ಶಾಂತಮ್ಮ ಇದ್ದರು.