Megaphone with Nominations speech bubble banner. Loudspeaker. Label for business, marketing and advertising. Vector on isolated background. EPS 10. 
ಜಿಲ್ಲೆ

ಪರಿಷತ್ ಉಪ ಚುನಾವಣೆ -5 ನಾಮಪತ್ರ ಸಲ್ಲಿಕೆ

Mangaluru - Hariprasad Rai


ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ನ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಗುರುವಾರ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಗಳಾದ ಅನ್ವರ್ ಸಾದತ್ ಮತ್ತು ಮಹಮ್ಮದ್ ರಿಯಾಝ್ ಇವರು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರಿಗೆ ನಾಮಪತ್ರ ಸಲ್ಲಿಸಿದರು. ಕಿಶೋರ್ ಕುಮಾರ್ 2 ಸೆಟ್ ಹಾಗೂ ಹಾಗೂ ರಾಜು ಪೂಜಾರಿ 3 ಸೆಟ್ ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಇದುವರೆಗೆ ಒಟ್ಟು ಐದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಅ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.7 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಅ.21 ರಂದು ಚುನಾವಣೆ ಹಾಗೂ ಅ.24ರಂದು ಮತ ಎಣಿಕೆ ನಡೆಯಲಿದೆ.