ಕಲಬುರಗಿ : ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮೊದಲ ಪ್ರಾಶಸ್ತ್ಯ ದ ಮತಗಳ 8ನೇ ( ಅಂತಿಮ ) ಸುತ್ತಿನ ಮತ ಎಣಿಕೆ ಈಗ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಹುಮನಾಬಾದ 4446 ಮತಗಳ ಮುನ್ನೆಡೆ ಸಾಧಿಸಿದ್ದಾರೆ.
ಅಂತಿಮ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಹುಮನಾಬಾದ ಅವರು 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ.
48,260 ಮತಗಳ ಕೋಟಾ ಫಿಕ್ಸ್ ಮಾಡಲಾಗಿದ್ದು ಈಗ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಆರಂಭಿಸಲಾಗುತ್ತಿದೆ.