ಜಿಲ್ಲೆ

ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

ಇಂದಿರಾ ಎನ್ ಕೆ

ಕುಂದಾಪುರ: ಪಡುಕೋಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಶನಿವಾರ ನಡೆಯಿತು.

ಶಾಲಾ ಪ್ರಾಕ್ತನ ವಿದ್ಯಾರ್ಥಿನಿ ಪದ್ಮಾ ಐತಾಳ್ ಪಡುಕೋಣೆ ನೋಟ್ ಪುಸ್ತಕದ ಪ್ರಾಯೋಜಕತ್ವ ವಹಿಸಿದ್ದರು. ಎಲ್‌ಕೆಜಿಯಿಂದ 8ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ನೋಟ್ ಪುಸ್ತಕ ವಿತರಿಸಿ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಉಪಾಧ್ಯಕ್ಷೆ ಪೂರ್ಣಿಮಾ, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಸಹಶಿಕ್ಷಕರು, ಗೌರವ ಶಿಕ್ಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ಯಾಮಲಾ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಮಿತಾ ಕಾರ್ಯಕ್ರಮ ನಿರೂಪಿಸಿದರು. ಸುಜಾತಾ ವಂದಿಸಿದರು.