*ಶಾಸಕ ಎನ್.ಶ್ರೀನಿವಾಸ್ ಭರವಸೆ
*ಕಲಿಕಾಸಾಮಗ್ರಿ ವಿತರಣೆ
ವಿಜಯವಾಣಿ ಸುದ್ದಿಜಾಲ ನೆಲಮಂಗಲ
ನಗರದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ನಗರದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲೂಕಿನಾದ್ಯಂತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಜತೆಗೆ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಮೂಲ ಸೌಕರ್ಯಗಳೊಂದಿಗೆ ನೋಟ್‌ಬುಕ್ ಹಾಗೂ ಕಲಿಕಾ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ನಗರದ ಕೇಂದ್ರ ಭಾಗದಲ್ಲಿರುವ ಸರ್ಕಾರಿ ಮಾದರಿ ಶಾಲೆಯಲ್ಲಿ ಸಾಕಷ್ಟು ಗಣ್ಯರು ವಿದ್ಯಾಭ್ಯಾಸ ಮಾಡಿದ್ದು, ಹೆಮ್ಮೆಯ ಸಂಗತಿ. ಈ ಬಾರಿ ಕರ್ನಾಟಕ ಪಬ್ಲಿಕ್ ಶಾಲೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ನಗರಸಭೆ ಅಧ್ಯಕ್ಷೆ ಎನ್.ಎಸ್.ಪೂರ್ಣಿಮಾ ಸುಗ್ಗರಾಜು ಮಾತನಾಡಿ, ಕ್ಷೇತ್ರದಾದ್ಯಂತ ಶಾಸಕರು ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡುತ್ತಿರುವುದು ಸಂತೋಷಕರ ಸಂಗತಿ. ವಿದ್ಯಾರ್ಥಿಗಳು ಎಲ್ಲ ರ್ಸವಕರ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆಯತ್ತ ಮುಖ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು, ಮುಖಂಡ ಕೆ.ಕೃಷ್ಣಪ್ಪ, ಎಂ.ಕೆ.ನಾಗರಾಜು, ಲಕ್ಷ್ಮೀನಾರಾಯಣ್, ಮುನಿಯಪ್ಪ ಶಾಲಾ ಮುಖ್ಯಶಿಕ್ಷಕ ಗಂಗಬೈಲಪ್ಪ ಇದ್ದರು.