ವಿಜಯವಾಣಿ ಸುದ್ದಿಜಾಲ ಉಡುಪಿ
ದಾನಿಗಳ ಮೂಲಕ ಅಥವಾ ಸರ್ಕಾರ ನೀಡಿರುವ ಪುಸ್ತಕ-ಪಟ್ಟಿಗಳ ಸದುಪಯೋಗ ಮಾಡಿಕೊಳ್ಳಬೇಕು. ಚೆನ್ನಾಗಿ ಓದಿ ಹೆಚ್ಚಿನ ಅಂಕ ಗಳಿಸಬೇಕು. ತನ್ಮೂಲಕ ಊರಿನ ಕೀರ್ತಿ ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳಿಗೆ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಕಿವಿಮಾತು ಹೇಳಿದರು.
ಪರ್ಕಳ ಪ್ರೌಢಶಾಲೆಯ ವಜ್ರ ಮಹೋತ್ಸವದ ಅಂಗವಾಗಿ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರ್ಕಳ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಅರುಣಾಚಲ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಪರ್ಕಳ ರೋಟರಿ ಅಧ್ಯಕ್ಷ ಸತ್ಯಾನಂದ ನಾಯಕ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಇಒ ರಮೇಶ ನಾಯಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಶಾಲೆಯ ಹಳೆಯ ವಿದ್ಯಾರ್ಥಿ ಪ್ರದಿಪ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಆನಂದ ನಾಯ್ಕ ಎಂ. ಸ್ವಾಗತಿಸಿದರು. ಶಾಲಾ ಸಂಚಾಲಕ ದಿನೇಶ ಹೆಗ್ಡೆ ಆತ್ರಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಆಂಗ್ಲ ಮಾಧ್ಯಮ ಮುಖ್ಯ ಶಿಕ್ಷಕಿ ಸುಜಾತಾ ಯು.ಎನ್. ವಂದಿಸಿದರು. ಸಹ ಶಿಕ್ಷಕ ಮನೋಹರ ನಾಯಕ ಕಾರ್ಯಕ್ರಮ ನಿರೂಪಿಸಿದರು.