ಮುಂಡೂರು ಗ್ರಾಮದ ಪಂಜಳದಿಂದ-ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಪರ್ಪುಂಜಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯಿತಿ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು, ಈ ಕುರಿತು ಕುರಿಯದ ಅಟೋ ರಿಕ್ಷಾ ಚಾಲಕರು ಮತ್ತು ಸ್ಥಳೀಯರು ಶಾಸಕ ಅಶೋಕ್‌ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು. 
ಜಿಲ್ಲೆ

ಸ್ಥಳೀಯರ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು ಗ್ರಾಮಾಂತರ: ಮುಂಡೂರು ಗ್ರಾಮದ ಪಂಜಳದಿಂದ-ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಪರ್ಪುಂಜಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯಿತಿ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು, ಈ ಕುರಿತು ಸ್ಥಳೀಯರು ನೀಡಿದ ಮನವಿಗೆ ಸ್ಪಂದಿಸಿದ ಶಾಸಕರು ರಸ್ತೆಯನ್ನು ವಾರದೊಳಗೆ ದುರಸ್ತಿ ಮಾಡುವಂತೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್‌ಗೆ ಸೂಚನೆ ನೀಡಿದರು.

ಪಂಜಳ-ಪರ್ಪುಂಜ ರಸ್ತೆಯಲ್ಲಿ ಅಲ್ಲಲ್ಲಿ ಡಾಮರು ಎದ್ದು ಹೋಗಿ ಹೊಂಡ ಗುಂಡಿಗಳಾಗಿವೆ. ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೆ ಅಸಾಧ್ಯವಾಗಿದೆ. ಈ ರಸ್ತೆಯನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಕುರಿಯದ ಆಟೋ ಚಾಲಕರ ಸಂಘದವರು ಶಾಸಕರಿಗೆ ಮನವಿ ಸಲ್ಲಿಸಿದರು. ಈ ಕುರಿತು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಜಿತೆ ಮಾತನಾಡಿದ ಶಾಸಕರು, ಒಂದು ವಾರದೊಳಗೆ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ನೀಡಿದರು.

ಕುರಿಯ ವಲಯ ಕಾಂಗ್ರೆಸ್ ಉಸ್ತುವಾರಿ ಶಿವರಾಮ ಆಳ್ವ, ರಮೇಶ್ ಅಂಚನ್, ಪ್ರಸಾದ್, ಇಲ್ಯಾಸ್ ಪಾಷಾ, ಇಮಾಂ ಷಾ, ರಮೇಶ್ ಎ., ಅಬ್ದುಲ್ಲ, ರಾಜೇಶ್, ಹಬೀಬ್, ನವೀನ್ ಕೋಟ್ಯಾನ್, ದುಗ್ಗಪ್ಪ, ಮುಸ್ಥಫಾ, ರಮೇಶ್, ನಿಝಾರ್, ಅಬ್ದುಲ್ಲ ಮತ್ತಿತರರು ನಿಯೋಗದಲ್ಲಿ ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.