ಜಿಲ್ಲೆ

ಸಮೀರ್ ಬಳ್ಳಾರಿ ನಿವಾಸಕ್ಕೆ ನೋಟಿಸ್

ಬಳ್ಳಾರಿ ; ಧರ್ಮಸ್ಥಳ ವಿರುದ್ಧ ಅಪಪ್ರಚಾರಗೈದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಇಲ್ಲಿನ ಕೌಲಬಜಾರ್ ಪ್ರದೇಶದಲ್ಲಿರುವ ನಿವಾಸಕ್ಕೆ ಬೆಳ್ತಗಂಡಿ ಪೊಲೀಸರು ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸಮೀರ್ ಕಳೆದ ಹತ್ತು ವರ್ಷಗಳ ಹಿಂದಯೇ ಕುಟುಂಬ ಸಮೇತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮೀರ್‌ನ ಆಧಾರ್ ಕಾರ್ಡ್‌ನಲ್ಲಿ ಬಳ್ಳಾರಿಯ ಕೌಲಬಜಾರ್‌ನ ನಿವಾಸದ ವಿಳಾಸದ ಹಿನ್ನೆಲೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯ, ಮನೆಯಲ್ಲಿ ಯಾರು ಇಲ್ಲದ ಕಾರಣ ಮನೆಯ ಹೊರಗಿನ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ.

ಈಗಾಗಲೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ಗೆ ಮೂರು ನೋಟಿಸ್ ನೀಡಿದರೂ ಹಾಜರಾಗಿಲ್ಲ. ಅಲ್ಲದೆ, ಆ.21 ರಂದು ಮಂಗಳೂರು ನ್ಯಾಯಾಲಯವು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದ್ದರಿಂದ, ಆ.24 ರಂದು ಬೆಳ್ತಂಗಡಿ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.