ಚಿಕ್ಕಮಗಳೂರಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ಕುರಿತು ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಡಿಸಿ ನಾರಾಯಣರಡ್ಡಿಕನಕರಡ್ಡಿ ಮತ್ತಿತರರಿದ್ದರು. 
ಜಿಲ್ಲೆ

ಕೆರೆಗಳ ಒತ್ತುವರಿ ತೆರವುಗೊಳಿಸಲು ಸೂಚನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿನ ಕೆರೆಗಳ ಒತ್ತುವರಿಯನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾಡತನಾಡಿದ ಅವರು, ಕೆರೆಗಳ ಸರ್ವೆ ನಡೆಸಿ ಒತ್ತುವರಿಯಾಗಿರುವ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಕ್ರಮವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಇನ್ನೂ ಒತ್ತುವರಿ ತೆರವುಗೊಳಿಸುವ ಕಾರ್ಯ ಜಿಲ್ಲೆಯಲ್ಲಿ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು. ಕೆರೆಗಳ ಸುತ್ತ ಬಯೋ ಸ್ಪೆನ್ಸಿಂಗ್ ಮಾಡುವಂತೆ ತಿಳಿಸಿದರು.
ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆಗಳಿಗೆ ಸಂಬAಧಿಸಿದ ಅಧಿಕಾರಿಗಳು ಭೇಟಿ ನೀಡಿ ಕಟ್ಟಡದ ಗುಣಮಟ್ಟ ಪರಿಶೀಲಿಸಿ ವರದಿ ನೀಡಬೇಕು. ಕಟ್ಟಡಗಳ ದುರಸ್ತಿ ಕಾರ್ಯವಿದ್ದರೆ ತಕ್ಷಣ ದುರಸ್ತಿ ಪಡಿಸುವಂತೆ ಕ್ರಮವಹಿಸಬೇಕು. ಮಳೆ, ಗಾಳಿಯಿಂದಾಗಿ ಮಲೆನಾಡು ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿರುವ ಕುರಿತು ದೂರುಗಳು ಬರುತ್ತಿವೆ. ತಕ್ಷಣ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಜುಲೈ ೧೫ ರಿಂದ ೩೧ರವರೆಗೆ ಅತಿ ಹೆಚ್ಚು ಮಳೆ ಹಾಗೂ ಗಾಳಿಯಿಂದಾಗಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಈಗಾಗಲೇ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕೆಲಸವಾಗುತ್ತಿದೆ. ಏ. ೧ರಿಂದ ಇಲ್ಲಿಯವರೆಗೆ ೫ ಮಾನವ, ೫ ಜಾನುವಾರುಗಳು ಮಳೆಗೆ ಮೃತಪಟ್ಟಿವೆ. ೪೩೧ ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಪರಿಹಾರವನ್ನು ನೀಡಲಾಗಿದೆ. ೨೭.೦೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರಿಗೆ ಹವಾಮಾನಕ್ಕನುಗುಣವಾಗಿ ಬೆಳೆ ಬೆಳೆಯುವ ಕುರಿತು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.
ಸಾರ್ವಜನಿಕರು ಆಸ್ತಿ ನೊಂದಣಿಯನ್ನು ಜಿಲ್ಲೆಯ ಯಾವುದೇ ಸಬ್‌ರಿಜಿಸ್ಟೆçÃಷನ್ ಕಚೇರಿಯಲ್ಲಾದರೂ ನೊಂದಾಯಿಸಿಕೊಳ್ಳಬಹುದು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು. ಮಳೆಯಿಂದಾಗಿ ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಕಾಂತರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.