ಮುಂಡರಗಿ: ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಹಯೋಗದಲ್ಲಿ 2023-24ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೆಂಕಟೇಶಮೂರ್ತಿ.ಟಿ.ಸಿ. ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಮುಸುಕಿನ ಜೋಳ, ಶೇಂಗಾ, ಸೂರ್ಯಕಾಂತಿ, ಭತ್ತ, ಜೋಳ ಸೇರಿದಂತೆ ಇತರ ಬೆಳೆಗಳನ್ನು ಸಮೀಕ್ಷೆ ಕೈಗೊಳ್ಳಲು ಅವಕಾಶ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು 2023-24 ಆ್ಯಪ್ ಮೂಲಕ ರೈತರು ಬೆಳೆದ ಬೆಳೆಗಳನ್ನು ವಿವರವಾಗಿ ದಾಖಲಿಸಬೇಕು. ಬೆಳೆ ವಿವರ ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ಅನುಕೂಲವಾಗಲಿದೆ.
ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ಬೆಳೆ ವಿವರಗಳನ್ನು ಸೆ.22ರೊಳಗಾಗಿ ದಾಖಲಿಸಬೇಕು. ಈ ಕಾರ್ಯಕ್ಕಾಗಿ ಖಾಸಗಿ ನಿವಾಸಿಗಳ ಸಹಾಯ ಪಡೆಯಲು ಹಾಗೂ ಕೃಷಿ, ಕಂದಾಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಕಾರಿಗಳನ್ನು ಅಥವಾ 18004253553 ಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.