ರಮೇಶ ನಾಯಕ 
ಜಿಲ್ಲೆ

ಎನ್‌ಪಿಸಿಐ ತಾಂತ್ರಿಕ ಸಮಸ್ಯೆ ನಿವಾರಿಸಿ

Kopala - Desk - Eraveni

ಕನಕಗಿರಿ: ಪರಿಶಿಷ್ಟ ವರ್ಗದ ಮಕ್ಕಳನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರಲು ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರೈಜ್‌ಮನಿ ಹೆಸರಿನಲ್ಲಿ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಆದರೆ, ತಾಂತ್ರಿಕ ದೋಷದಿಂದ ಫಲಾನುಭವಿಗಳಿಂದ ದೂರ ಉಳಿದಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ನಾಯಕ ಹೇಳಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂ.13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದರ ದಿನಾಂಕ ವಿಸ್ತರಣೆ ಮಾಡಲಾಗುವುದಿಲ್ಲವೆಂದು ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಯಾವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸ್ವೀಕರಿಸಿರುವುದಿಲ್ಲ.

ಅಧಿಕಾರಿಗಳನ್ನು ಕೇಳಿದರೆ ಎನ್‌ಪಿಸಿಐ ತಾಂತ್ರಿಕ ಕಾರಣದಿಂದ ಅರ್ಜಿ ಸ್ವೀಕರಿಸಲಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾದರೆ ಸರ್ಕಾರದ ಸೌಲಭ್ಯ ಪಡೆಯುವುದ ಹೇಗೆ?. ಜಿಲ್ಲಾಧಿಕಾರಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಎನ್‌ಪಿಸಿಐ ಸಮಸ್ಯೆ ಸರಿಪಡಿಸಲು ಸೂಚಿಸಬೇಕು ಮತ್ತು ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.