ತುಮಕೂರು: ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಘಟಕ ಪ್ರಶಸ್ತಿಗೆ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜು ಭಾಜನವಾಗಿದೆ.
ಬೆಂಗಳೂರಿನ ರಾಜಭವನದ ಗಾಜಿನಮನೆಯಲ್ಲಿ ರಾಜ್ಯ ಎನ್ಎಸ್ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022- 23ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ಎಸ್) ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿದ್ಯೋದಯ ಕಾಲೇಜು ತಂಡ ಅತ್ಯುತ್ತಮ ಎನ್ಎಸ್ಎಸ್ ಘಟಕ ಹಾಗೂ ಎನ್ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ.ವಿ.ಕಿಶೋರ್ ಗೆ "ರಾಜ್ಯಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ' ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಯುವ ಸಬಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್, ಇಲಾಖೆಯ ಆಯುಕ್ತ ಆರ್.ಚೇತನ್, ರಾಜ್ಯ ಎನ್ಎಸ್ಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶಕ ಡಿ.ಕಾರ್ತಿಗೇಯನ್ ಉಪಸ್ಥಿತರಿದ್ದರು.
ವಿದ್ಯೋದಯ ಕಾನೂನು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಎಚ್.ಎಸ್.ರಾಜು, ಕಾಲೇಜಿನ ಸಿಇಒ ಚಂದ್ರಣ್ಣ, ಪ್ರಾಂಶುಪಾಲೆ ಶಾಮಾ ಸೈದಿ, ಎನ್ಎಸ್ಎಸ್ ಅಧಿಕಾರಿಗಳಾದ ಪುಷ್ಪ, ಮಧುಸೂದನ್ ಮತ್ತಿತರರು ಭಾಗವಹಿಸಿದ್ದರು.