ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ನೆಸ್ಸೆಸ್ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರ ಡಿ.24ರಿಂದ 30ರವರೆಗೆ ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅಧ್ಯಕ್ಷತೆ ವಹಿಸಿದ್ದರು. ಗುರುಕುಲ ವಿದ್ಯಾವರ್ಧಕ ಸಂಘ ಅಧ್ಯಕ್ಷ ಗಜಾನನ ಮರಾಠೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್ ಟಿ., ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ, ಮಾಳ ಗ್ರಾಪಂ ಅಧ್ಯಕ್ಷ ಉಮೇಶ್ ಪೂಜಾರಿ, ಎನ್ನೆಸ್ಸೆಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್ ಉಪಸ್ಥಿತರಿದ್ದರು.