ಚಿಮ್ಮಡ ಗ್ರಾಮದಲ್ಲಿ ಬನಹಟ್ಟಿಯ ಶ್ರೀ ತಮ್ಮಣ್ಣಪ್ಪ ಚಿಕ್ಕೋಡಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಸರ್ಕಾರಿ ಪ್ರೌಢಶಾಲೆಯ ಆವರಣವನ್ನು ಸ್ವಚ್ಛಗೊಳಿಸಿದರು.  
ಜಿಲ್ಲೆ

ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ವಿನಯ ಆಶೋಕ ನಾಯ್ಕ

ಚಿಮ್ಮಡ: ಗ್ರಾಮದಲ್ಲಿ ಬನಹಟ್ಟಿಯ ಶ್ರೀ ತಮ್ಮಣ್ಣಪ್ಪ ಚಿಕ್ಕೋಡಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಗ್ರಾಮದ ಪರಿಸರವನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ನನ್ನ ಭಾರತಕ್ಕಾಗಿ ಯುವಕರು ಧ್ಯೇಯ ವಾಕ್ಯದೊಂದಿಗೆ ಕಳೆದ ಐದು ದಿನಗಳಿಂದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣ, ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸುತ್ತಲಿನ ಪರಿಸರ ಹಾಗೂ ಗ್ರಾಮದ ಪ್ರಮುಖ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಜಿ.ಎಸ್. ಪಾಟೀಲ, ರೇಷ್ಮಾ ಗಜಾಗೋಳ, ಉಪನ್ಯಾಸಕ ವಿಠ್ಠಲ ಪಾಟೀಲ ಹಾಗೂ ವಿದ್ಯಾಲಯದ ಕಲಾ, ವಾಣಿಜ್ಯ ಹಾಗೂ ಬಿಬಿಎ ಪದವಿಯ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.